Publish Date: Sat, 29 Apr 2023 (13:54 IST)
Updated Date: Sat, 29 Apr 2023 (14:05 IST)
ಹೈದರಾಬಾದ್ : ಆಂಧ್ರಪ್ರದೇಶದ ಪರೀಕ್ಷಾ ಮಂಡಳಿ ಬುಧವಾರ 11 ಮತ್ತು 12 ನೇ ತರಗತಿಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ನಂತರ ಒಂಭತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀಕಾಕುಳಂ ಜಿಲ್ಲೆಯ ಗೋಪಾಲಪುರಂ ಗ್ರಾಮದ 17 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿ ಹೆಚ್ಚಿನ ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡಿದ್ದ. ಇದರಿಂದ ಮನನೊಂದು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಲ್ಕಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿನಾಧಪುರಂನ 16 ವರ್ಷದ ಬಾಲಕಿ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲವು ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡು ನೊಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ವಿಶಾಖಪಟ್ಟಣಂನ ಕಂಚರಪಾಲೆಂನ 18 ವರ್ಷದ ಯುವಕ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಆತ ದ್ವಿತೀಯ ಪಿಯುಸಿಯ ಒಂದು ವಿಷಯದಲ್ಲಿ ಫೇಲ್ ಆಗಿದ್ದ ಎಂದು ತಿಳಿದು ಬಂದಿದೆ.