Publish Date: Wed, 15 Dec 2021 (13:46 IST)
Updated Date: Wed, 15 Dec 2021 (13:48 IST)
ಲಕ್ನೋ : ಕುಡಿದ ಮತ್ತಿನಲ್ಲಿ ತಂದೆಯೇ ತನ್ನ 9 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಫತೇಪುರ್ ಜಿಲ್ಲೆಯ ಖಾಗಾ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕುಡಿದ ಅಮಲಿನಲ್ಲಿದ್ದ ತಂದೆ ತನ್ನ ಪಕ್ಕದಲ್ಲೇ ಮಗಲಿದ್ದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಬಾಲಕಿ ಅಳುತ್ತಿರುವ ಶಬ್ದ ಕೇಳಿ ಸ್ಥಳಕ್ಕೆ ಬಂದ ಆರೋಪಿಯ ಸಹೋದರನಿಗೆ ವಿಷಯ ಗೊತ್ತಾಗಿದೆ. ನಂತರ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳವಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಾಂಗಾದ ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಗಯಾದತ್ ಮಿಶ್ರಾ ತಿಳಿಸಿದ್ದಾರೆ.