Webdunia - Bharat's app for daily news and videos

Install App

ವಾರಕ್ಕೆ 90 ಗಂಟೆ ಕೆಲಸ: ಸುಬ್ರಹ್ಮಣ್ಯನ್‌ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಏನದ್ರು ಗೊತ್ತಾ

Sampriya
ಬುಧವಾರ, 15 ಜನವರಿ 2025 (17:30 IST)
Photo Courtesy X
ನವದೆಹಲಿ: ಎಲ್‌ಅಂಡ್‌ಟಿ ಕಂಪನಿ ಸಿಇಒ ಎಸ್‌.ಎನ್‌. ಸುಬ್ರಹ್ಮಣ್ಯನ್ ಅವರ ವಾರಕ್ಕೆ 90 ಗಂಟೆಗಳ ಕೆಲಸ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಸುಬ್ರಹ್ಮಣ್ಯನ್ ಅವರ ಹೇಳಿಕೆಗೆ ಸಹಮತವಿಲ್ಲ ಎಂದಿದ್ದಾರೆ.

ಕಾರ್ಮಿಕರು ದಿನಕ್ಕೆ 8 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಬಾರದು ಎಂದು ಮಾಜಿ ಪ್ರಧಾನಿ ಜವಾಹರ ಲಾಲ್‌ ನೆಹರೂ ಮತ್ತು ಬಿ.ಆರ್‌.ಅಂಬೇಡ್ಕರ್ ಪ್ರತಿಪಾದಿಸಿದ್ದರು ಎಂದು ಖರ್ಗೆ ಹೇಳಿದ್ದಾರೆ.

ನೂತನವಾಗಿ ನಿರ್ಮಾಣಗೊಂಡಿರುವ ಪಕ್ಷದ ಕೇಂದ್ರ ಕಚೇರಿ ಉದ್ಘಾಟನೆ ಬಳಿಕ ಪಕ್ಷದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಈ ನೂತನ ಕಟ್ಟಡವನ್ನು ನಿರ್ಮಿಸಿದ ಎಲ್‌ಅಂಡ್‌ಟಿ ಕನ್‌ಸ್ಟ್ರಕ್ಷನ್‌ ಕಂಪನಿ, ಅದರ ವಾಸ್ತುಶಿಲ್ಪಿಗಳು ಮತ್ತು ಕಾರ್ಮಿಕರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಆದರೆ, ಕಂಪನಿ ಸಿಇಒ ಮಾಡಿರುವ ವಾರಕ್ಕೆ 90 ಗಂಟೆ ಕೆಲಸ ಹೇಳಿಕೆಗೆ ನನ್ನ ಅಸಮ್ಮತಿಯಿದೆ ಎಂದರು.

ಒಬ್ಬ ಕಾರ್ಮಿಕ 8 ಗಂಟೆಗಳ ಕಾಲ ಕೆಲಸ ಮಾಡಿ ಆಯಾಸಗೊಳ್ಳುತ್ತಾನೆ. ಅದಕ್ಕಾಗಿಯೇ ಅಂಬೇಡ್ಕರ್ ಮತ್ತು ನೆಹರೂ ಅವರು ಕಾರ್ಖಾನೆ ಕಾಯ್ದೆ ಜಾರಿಗೆ ತರುವಾಗ ಕಾರ್ಮಿಕರು ಎಂಟು ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸಬಾರದು ಎಂದಿದ್ದರು. ಹೀಗಾಗಿ ವಾರಕ್ಕೆ 90 ಗಂಟೆ ಕೆಲಸಕ್ಕೆ ಸಮ್ಮತಿಯಿಲ್ಲ ಎಂದು ಈ ಹಿಂದೆ ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದ್ದ ಖರ್ಗೆ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments