Publish Date: Tue, 21 Jun 2022 (14:11 IST)
Updated Date: Tue, 21 Jun 2022 (14:13 IST)
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,923 ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ನಿನ್ನೆಗೆ ಹೋಲಿಸಿದರೆ ಅಲ್ಪ ಕುಸಿತ ಕಂಡು ಬಂದಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ ೧೭ ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇದರಿಂದ ದೇಶದಲ್ಲಿ ಒಟ್ಟಾರೆ ಮೃತರ ಸಂಖ್ಯೆ 5,24,890ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 7,293 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 4,27,15,193ಕ್ಕೆ ಏರಿಕೆಯಾಗಿದೆ. ಇದರಿಂದ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 79,313ಕ್ಕೆ ಏರಿಕೆಯಾಗಿದೆ.