ಲಕ್ನೋ : ಅತ್ಯಾಚಾರಕ್ಕೊಳಗಾಗಿದ್ದ ಗಾಜಿಯಾಬಾದ್ನ 12 ವರ್ಷದ ಬಾಲಕಿ ಮೆಡಿಕಲ್ ಕಾಲೇಜಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಗಾಜಿಯಾಬಾದ್ನ ಖೋಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಬಾಲಕಿಯನ್ನು ಅಕ್ಟೋಬರ್ 1 ರಂದು ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು.
ಇದೀಗ ಸಿ-ಸೆಕ್ಷನ್ನಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಆರ್.ಕೆ.ಗುಪ್ತಾ ತಿಳಿಸಿದ್ದಾರೆ.
ಬಾಲಕಿ 7ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯಾಗಿದ್ದು, ಅವರ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದ 19 ವರ್ಷದ ಯುವಕ ಆಕೆಗೆ ಬೆದರಿಸಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ತಮ್ಮ ಮಾತು ಕೇಳದೇ ಹೋದರೆ ನಿನ್ನ ತಂದೆ ತಾಯಿಯನ್ನು ಕೊಲ್ಲುತ್ತೇವೆ ಎಂದು ಬೆದರಿಸಿ 21 ವರ್ಷದ ಆರೋಪಿ ಸಹೋದರ ಕೂಡ ಅತ್ಯಾಚಾರ ವೆಸಗಿದ್ದಾನೆ ಎಂದು ಕುಟುಂಬಸ್ಥರು ಪೊಲೀಸರಿಗೆ ಹೇಳಿದ್ದಾರೆ.
ಇಷ್ಟಲ್ಲದೇ ಇಬ್ಬರು ಸಹೋದರರು ಸೇರಿಕೊಂಡು ಹಣಕ್ಕಾಗಿ ಬಾಲಕಿಯನ್ನು ಇನ್ನೊಬ್ಬರಿಗೂ ಹಸ್ತಾಂತರಿಸಿದ್ದಾರೆ. ಇದರಿಂದ ಲೈಂಗಿಕ ಲಾಭವನ್ನು ಕೂಡ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಈ ವಿಚಾರ ತಿಳಿದು ಆಕೆಯ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ.