Select Your Language

Notifications

webdunia
webdunia
webdunia
webdunia

15 ವರ್ಷದ ಬಾಲಕಿ ಮೇಲೆ ಅತ್ಯಾಚಾರ! ಮುಂದೇನಾಯ್ತು?

15 ವರ್ಷದ ಬಾಲಕಿ ಮೇಲೆ ಅತ್ಯಾಚಾರ! ಮುಂದೇನಾಯ್ತು?
ಹೈದರಾಬಾದ್ , ಸೋಮವಾರ, 28 ಫೆಬ್ರವರಿ 2022 (17:31 IST)
ಹೈದರಾಬಾದ್ : 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಮುನ್ಸಿಪಲ್ ಕೌನ್ಸಿಲ್ನ ಉಪಾಧ್ಯಕ್ಷ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ನಾಯಕ ಅತ್ಯಾಚಾರವೆಸಗಿದ್ದಾರೆ.
 
ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಸಾಜಿದ್ ಖಾನ್ ಎಂದು ಗುರುತಿಸಲಾಗಿದೆ. ಇದೀಗ ಆರೋಪಿ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಫೆಬ್ರವರಿ 26 ರಂದು ಮಕ್ಕಳ ಕಲ್ಯಾಣ ಸಮಿತಿಗೆ ಅತ್ಯಾಚಾರ ಘಟನೆ ಕುರಿತಂತೆ ಮಾಹಿತಿ ದೊರೆತಿದ್ದು, ಬಳಿಕ ಪೊಲೀಸರಿಗೆ ವಿಚಾರ ತಿಳಿಸಿದರು.

ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಲಕಿಯಿಂದ ಹೇಳಿಕೆ ಪಡೆದರು. ಅಲ್ಲದೇ ಪ್ರಕರಣದಲ್ಲಿ ಭಾಗಿಯಾಗಿರುವ ಮಹಿಳೆ, ಕಾರು ಚಾಲಕ ಮತ್ತು ಸಾಜಿದ್ ಖಾನ್ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ) ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ 4ನೇ ಅಲೆ ಸಾಧ್ಯತೆ!