Webdunia - Bharat's app for daily news and videos

Install App

ಪ್ಲಾಸ್ಟಿಕ್ ಗನ್ ತೋರಿಸಿ ಜ್ಯುವೆಲ್ಲರಿ ಶಾಪ್ ದರೋಡೆ ಮಾಡಿದ 16ರ ಬಾಲಕ!

Webdunia
ಮಂಗಳವಾರ, 9 ಮೇ 2023 (13:17 IST)
ಮುಂಬೈ : 16 ವರ್ಷದ ಬಾಲಕನೊಬ್ಬ ಪ್ಲಾಸ್ಟಿಕ್ ಗನ್ ತೋರಿಸಿ ಚಿನ್ನಾಭರಣ ಅಂಗಡಿಯನ್ನು ದರೋಡೆ ಮಾಡಲು ಯತ್ನಿಸಿದ ಘಟನೆ ಮುಂಬೈನ ಪಶ್ಚಿಮ ಭಾಯಂದರ್ನಲ್ಲಿ ನಡೆದಿದೆ.
 
ಪೊಲೀಸರ ಮಾಹಿತಿ ಪ್ರಕಾರ ಬಾಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದಕ್ಕೆ ಕಳ್ಳತನ ಮಾಡಲು ಯತ್ನಿಸಿದ್ದಾಗಿ ಹೇಳಿದ್ದಾನೆ. ಶನಿವಾರ 4:30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಆಭರಣ ಅಂಗಡಿಯೊಂದಕ್ಕೆ ನುಗ್ಗಿದ ಬಾಲಕ ಪ್ಲಾಸ್ಟಿಕ್ ಗನ್ ತೋರಿಸಿ ದರೋಡೆ ಮಾಡಿದ್ದಾನೆ.

ಭಾಯಂದರ್ನ 60 ಅಡಿ ರಸ್ತೆಯಲ್ಲಿರುವ ಶಕ್ತಿ ಜ್ಯುವೆಲರ್ಸ್ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಸಂಜೆ 4.30 ರ ಸಮಯದಲ್ಲಿ ಪಶ್ಚಿಮ ಭಾಯಂದರ್ ವೆಸ್ಟ್ನ 60 ಅಡಿ ರಸ್ತೆಯಲ್ಲಿರುವ ಶಕ್ತಿ ಜ್ಯುವೆಲರ್ಸ್ ಅಂಗಡಿಗೆ ಬಂದ ಬಾಲಕ ಮೊದಲು ತಾನೂ ಚಿನ್ನದ ಬಿಸ್ಕೆಟ್ಗಳನ್ನು ಮಾರಾಟ ಮಾಡಲು ಬಂದಿದ್ದೇನೆ ಎಂದು ಆಭರಣ ವ್ಯಾಪಾರಿಗೆ ತಿಳಿಸಿದ್ದಾನೆ.

ಆದರೆ ಆಭರಣ ವ್ಯಾಪಾರಿ ತಾನೂ ಅವುಗಳನ್ನು ಖರೀದಿಸುವುದಿಲ್ಲ ಎಂದು ತಿಳಿಸಿ, ಹೊರ ಹೋಗಲು ಸೂಚಿಸಿದ್ದಾನೆ. ಕೆಲವು ನಿಮಿಷಗಳ ನಂತರ, ಹುಡುಗ ಮತ್ತೆ ಅಂಗಡಿ ಒಳಗೆ ಬಂದವನೇ ಪ್ಲಾಸ್ಟಿಕ್ ಗನ್ ಹಿಡಿದು ಹೆದರಿಸಿ ಆಭರಣಗಳನ್ನು ದರೋಡೆ ಮಾಡಿದ್ದಾನೆ ಎಂದು ಭಾಯಂದರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಮುಕುಟರಾವ್ ಪಾಟೀಲ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments