Select Your Language

Notifications

webdunia
webdunia
webdunia
webdunia

ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಸಾಯಿಸಿದ 16ರ ಬಾಲಕ!

ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಸಾಯಿಸಿದ 16ರ ಬಾಲಕ!
ಭೋಪಾಲ್ , ಮಂಗಳವಾರ, 7 ಫೆಬ್ರವರಿ 2023 (09:02 IST)
ಭೋಪಾಲ್ : 16 ವರ್ಷದ ಬಾಲಕನೊಬ್ಬ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಆಕೆಗೆ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರಂದು ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 2 ವರ್ಷಗಳ ಹಿಂದೆ ಬಾಲಕ ಮೊಬೈಲ್ ಕಳ್ಳತನ ಮಾಡಿದ್ದಾಗಿ ಆರೋಪಿಸಲಾಗಿತ್ತು. ಇದರ ದ್ವೇಷಕ್ಕೆ ಆತ ಈ ಭೀಕರ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದೆ.

ವರದಿಗಳ ಪ್ರಕಾರ ಬಾಲಕ ಮಹಿಳೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಹಾಗೂ ಬಟ್ಟೆಯನ್ನು ತುರುಕಿ, ಆಕೆ ವಾಸವಿದ್ದ ನಿರ್ಮಾಣ ಹಂತದ ಕಟ್ಟಡದೆಡೆಗೆ ಎಳೆದೊಯ್ದು, ಆಕೆಯ ತಲೆ ಹಾಗೂ ದೇಹದ ಇತರ ಭಾಗಗಳಿಗೆ ದೊಣ್ಣೆಯಿಂದ ಹೊಡೆದಿದ್ದಾನೆ. ಮಾತ್ರವಲ್ಲದೇ ಆಕೆಯ ಖಾಸಗಿ ಭಾಗಗಳಿಗೆ ಗಾಯಗೊಳಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅದಾನಿ ವಿಚಾರದಲ್ಲಿ ತೀವ್ರವಾದ ಪ್ರತಿಪಕ್ಷಗಳ ಪ್ರತಿಭಟನೆ