Select Your Language

Notifications

webdunia
webdunia
webdunia
webdunia

19 ವರ್ಷದ ಯುವತಿಯೊಬ್ಬಳಿಂದ ಮಹಿಳೆಯ ಮೇಲೆ ಅತ್ಯಾಚಾರ

19 ವರ್ಷದ ಯುವತಿಯೊಬ್ಬಳಿಂದ ಮಹಿಳೆಯ ಮೇಲೆ ಅತ್ಯಾಚಾರ
ನವದೆಹಲಿ , ಬುಧವಾರ, 6 ಫೆಬ್ರವರಿ 2019 (06:20 IST)
ನವದೆಹಲಿ : 19 ವರ್ಷದ ಯುವತಿಯೊಬ್ಬಳು ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣವೊಂದು ಇದೇ ಮೊದಲ ಬಾರಿಗೆ ದೇಶದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.



 



ಕಳೆದ ವರ್ಷ ಸೆಪ್ಟಂಬರ್ ನಲ್ಲಿ ಸುಪ್ರೀಂ ಕೋರ್ಟ್ ಸಲಿಂಗಕಾಮಕ್ಕೆ ಮಾನ್ಯತೆ ನೀಡಿ ಆದೇಶ ನೀಡಿತ್ತು. ಆದರೆ ಕೋರ್ಟ್ ನ ಈ ತೀರ್ಪನ್ನು ದುರ್ಬಳಕೆ ಮಾಡಿಕೊಂಡ ಯುವತಿಯೊಬ್ಬಳು ಕೃತಕವಾಗಿ ಪುರುಷ ಜನನಾಂಗವನ್ನು ಸೊಂಟಕ್ಕೆ ಕಟ್ಟಿಕೊಂಡು ಮಹಿಳೆಯೊಬ್ಬಳ ಮೇಲೆ , ಬಲವಂತವಾಗಿ ಮತ್ತು ಅಸಹಜವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ಈ ಬಗ್ಗೆ  ಅತ್ಯಾಚಾರಕ್ಕೆ ಒಳಗಾದ ಮಹಿಳೆ ದೂರು ನೀಡಿದ್ದಾರೆ.


ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ಬಳಿಕ ತನ್ನ ತಪ್ಪನ್ನು ಒಪ್ಪಿಕೊಂಡ  ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ ಯುವತಿಯನ್ನು ಬಂಧಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಧಾನಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ನಾಯಕ