Webdunia - Bharat's app for daily news and videos

Install App

ಚಾಕಲೇಟ್ ಆಮಿಷೆ ತೋರಿಸಿ 4ರ ಬಾಲಕಿ ಮೇಲೆ ಅತ್ಯಾಚಾರ!

Webdunia
ಮಂಗಳವಾರ, 21 ಮಾರ್ಚ್ 2023 (09:59 IST)
ಲಕ್ನೋ : ಚಾಕಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಉತ್ತರಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಉತ್ತರಪ್ರದೇಶದ ಬರೇಲಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯು ತನ್ನ ಸ್ನೇಹಿತರೊಂದಿಗೆ ಹೊರಗಡೆ ಆಡುತ್ತಿದ್ದಳು. ಈ ವೇಳೆ ಚಾಕಲೇಟ್ ಕೊಡುವ ನೆಪದಲ್ಲಿ 25 ವರ್ಷದ ಯುವಕ ಬಾಲಕಿಯನ್ನು ಕರೆದಿದ್ದಾನೆ.
 
ಅದಾದ ಬಳಿಕ ಬಾಲಕಿಯನ್ನು ಆತ ಯಾರೂ ಇಲ್ಲದ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಘಟನೆ ವೇಳೆ ಅತ್ಯಾಚಾರ ಸಂತ್ರಸ್ತೆಯ ತಂದೆ ಗುತ್ತಿಗೆ ಕಾರ್ಮಿಕನಾಗಿದ್ದರಿಂದ ಕೆಲಸಕ್ಕೆ ಹೋಗಿದ್ದ ಹಾಗೂ ಆಕೆಯ ತಾಯಿ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಅದಾದ ಬಳಿಕ ತಾಯಿಯು ಮನೆಗೆ ಮರಳಿದಾಗ ಬಾಲಕಿ ನಾಪತ್ತೆ ಆಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಗಳನ್ನು ಮಹಿಳೆಯು ಹುಡುಕಲು ಪ್ರಾರಂಭಿಸಿದ್ದಾಳೆ. 

ಈ ವೇಳೆ ಮಹಿಳೆ ದೂರದಲ್ಲಿ ಮಗಳು ಅಳುತ್ತಿರುವುದನ್ನು ಕೇಳಿದ್ದಾಳೆ. ಈ ವೇಳೆ ಬಾಲಕಿಯು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಜೊತೆಗೆ ಕೃತ್ಯವೆಸಗಿದ ಬಳಿಕ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಾಯಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments