ಬಿಹಾರ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಆಡಳಿತರೂಢ ನಿತೀಶ್‌ ಕುಮಾರ್‌ ಪಕ್ಷಕ್ಕೆ ಬಿಗ್‌ಶಾಕ್‌

Sampriya
ಭಾನುವಾರ, 2 ನವೆಂಬರ್ 2025 (11:42 IST)
Photo Credit X
ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಜೆಡಿಯು ಮುಖ್ಯಸ್ಥ, ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಬಿಗ್‌ ಶಾಕ್‌ ಎದುರಾಗಿದೆ. ಜೆಡಿಯು ಪಕ್ಷದಿಂದ ಕಣಕ್ಕಿಳಿದಿರುವ ಮಾಜಿ ಶಾಸಕ ಅನಂತ್‌ ಸಿಂಗ್‌ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದಾರೆ.

ಜನ ಸುರಾಜ್‌ ಬೆಂಬಲಿಗ ದುಲಾರ್‌ ಚಂದ್ ಯಾದವ್‌ ಕೊಲೆ ಪ್ರಕರಣದಲ್ಲಿ ಜೆಡಿಯುನಿಂದ ಸ್ಪರ್ಧಿಸಿರುವ ಮಾಜಿ ಶಾಸಕನನ್ನು ಇಂದು ಮುಂಜಾನೆ ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಜನತಾ ದಳ ಜೊತೆ ಸಂಬಂಧ ಹೊಂದಿದ್ದ ಗ್ಯಾಂಗ್‌ಸ್ಟರ್‌ ಯಾದವ್, ಗುರುವಾರ ಮೊಕಾಮಾದಲ್ಲಿ ತಮ್ಮ ಸೋದರಳಿಯ ಪ್ರಿಯದರ್ಶಿ ಪಿಯೂಷ್ ಪರ ಪ್ರಚಾರ ನಡೆಸುತ್ತಿದ್ದಾಗ ಹತ್ಯೆಗೀಡಾಗಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷದಿಂದ ಪಿಯೂಷ್ ಸ್ಪರ್ಧಿಸುತ್ತಿದ್ದಾರೆ.  

ಮೊಕಾಮಾದ ಜೆಡಿಯು ಅಭ್ಯರ್ಥಿ ಮತ್ತು ಹಾಲಿ ಶಾಸಕ ಸಿಂಗ್ ಅವರನ್ನು ಬರ್ಹ್‌ನಲ್ಲಿರುವ ಅವರ ನಿವಾಸದಿಂದ ಬಂಧಿಸಲಾಯಿತು. ಜೊತೆಗೆ ಘಟನೆ ನಡೆದಾಗ ಅಲ್ಲಿಯೇ ಇದ್ದ ಮಣಿಕಾಂತ್ ಠಾಕೂರ್ ಮತ್ತು ರಂಜೀತ್ ರಾಮ್ ಎಂಬ ಇಬ್ಬರನ್ನು ಸಹ ಬಂಧಿಸಲಾಯಿತು.

ದುಲಾರ್ ಚಂದ್ ಯಾದವ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಅನಂತ್ ಸಿಂಗ್, ಮಣಿಕಾಂತ್ ಠಾಕೂರ್ ಮತ್ತು ರಂಜೀತ್ ರಾಮ್ ಎಂಬ ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಪಾಟ್ನಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಾರ್ತಿಕೇಯ ಶರ್ಮಾ ಅವರು ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 

2020 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅನಂತ್ ಸಿಂಗ್ ಅವರು ಆರ್‌ಜೆಡಿ ಅಭ್ಯರ್ಥಿಯಾಗಿ ಗೆದ್ದಿದ್ದರು. ಆದರೆ, ನಂತರ 2022 ರಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಶಿಕ್ಷೆಗೊಳಗಾದ ನಂತರ ಅನರ್ಹಗೊಳಿಸಲಾಯಿತು. ನಂತರ ಅವರ ಪತ್ನಿ ನೀಲಂ ದೇವಿ ಉಪಚುನಾವಣೆಯಲ್ಲಿ ಗೆದ್ದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಗ್ಗಿದ ಸೈಕ್ಲೋನ್‌ ಎಫೆಕ್ಟ್‌, ಹಲವು ಜಿಲ್ಲೆಗಳಲ್ಲಿ ಒಣ ಹವೆ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಮುಂದಿನ ಸುದ್ದಿ
Show comments