Select Your Language

Notifications

webdunia
webdunia
webdunia
webdunia

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

bandipur safari timing

Sampriya

ಬೀದರ್ , ಶುಕ್ರವಾರ, 7 ನವೆಂಬರ್ 2025 (23:41 IST)
ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಬೇಕೆಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಇನ್ನೂ  ಅರಣ್ಯ ಇಲಾಖೆ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಖಂಡ್ರೆ ಸೂಚಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿದ ಈಶ್ವರ್‌ ಖಂಡ್ರೆ ಅವರು, ಇಂದು ಬೆಳಗ್ಗೆ ಹುಲಿ ದಾಳಿಯಿಂದ ಸಾವನ್ನಪ್ಪಿದ ಚೌಡಯ್ಯ ನಾಯ್ಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಇನ್ನೂ ಕಳೆದ ಒಂದು ತಿಂಗಳಿನಿಂದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಹುಲಿ ದಾಳಿಯಿಂದ ಮೂವರು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಹುಲಿ ದಾಳಿಯ ನಂತರ ಅಕ್ಟೋಬರ್ 27ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಹಾಗೂ ಕಳೆದ 2ರಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಾಸಕರುಗಳ ಸಮ್ಮುಖದಲ್ಲಿ ರೈತರು, ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಹುಲಿ ಸೆರೆಗೆ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅದಲ್ಲದೆ  ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರೂ ಮತ್ತೊಂದು ದಾರುಣ ಘಟನೆ ಸಂಭವಿಸಿರುವುದು ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಹಾಗೂ ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ