Publish Date: Wed, 05 Sep 2018 (09:42 IST)
Updated Date: Wed, 05 Sep 2018 (10:03 IST)
ಜೈಪುರ: 12 ವರ್ಷದ ಬಾಲಕನೊಬ್ಬ 4 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆಯೊಂದು ರಾಜಸ್ಥಾನ ಉದಯಪುರ ಜಿಲ್ಲೆಯ ಜಾಡೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶನಿವಾರ ಮಧ್ಯಾಹ್ನ ಬಾಲಕ ಮನೆಯಿಂದ ಹೊರಗೆ ಹೋಗಿರುವುದನ್ನು ಗಮನಿಸಿದ ಪೋಷಕರು ಆತ ಗೆಳೆಯರೊಂದಿಗೆ ಆಟ ಆಡುತ್ತಿರಬಹುದು ಎಂದು ಭಾವಿಸಿದ್ದರು. ಆದರೆ ಆತ ತನ್ನ ಪಕ್ಕದ ಮನೆಯ ಕಂದಮ್ಮನ ಮೇಲೆ ಅತ್ಯಾಚಾರ ಎಸೆಗಿದ್ದಾನೆ.
ಬಾಲಕಿ ಸಂಜೆ ಮನೆಗೆ ಬಂದಾಗ ಆಕೆಯ ಬಟ್ಟೆಯೆಲ್ಲಾ ರಕ್ತಮಯವಾಗಿದ್ದು, ಗುಪ್ತಾಂಗದಲ್ಲಿ ಕಾಣಿಸಿಕೊಂಡ ನೋವಿನಿಂದ ಅಳುತ್ತಾ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲ ವೈದ್ಯಕೀಯ ಪರೀಕ್ಷೆಯ ಬಳಿಕ ಆಕೆಯ ಪೋಷಕರೊಂದಿಗೆ ಕಳುಹಿಸಿದ್ದು, ಪ್ರಕರಣಕ್ಕೆ ಸಂಬಂದಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗ್ತಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ