ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಬಾಲಕ

Webdunia
ಬುಧವಾರ, 5 ಸೆಪ್ಟಂಬರ್ 2018 (09:42 IST)
ಜೈಪುರ: 12 ವರ್ಷದ ಬಾಲಕನೊಬ್ಬ 4 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ  ಎಸಗಿರುವ ಆಘಾತಕಾರಿ ಘಟನೆಯೊಂದು ರಾಜಸ್ಥಾನ ಉದಯಪುರ ಜಿಲ್ಲೆಯ ಜಾಡೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಶನಿವಾರ ಮಧ್ಯಾಹ್ನ ಬಾಲಕ ಮನೆಯಿಂದ ಹೊರಗೆ ಹೋಗಿರುವುದನ್ನು ಗಮನಿಸಿದ ಪೋಷಕರು ಆತ ಗೆಳೆಯರೊಂದಿಗೆ ಆಟ ಆಡುತ್ತಿರಬಹುದು ಎಂದು ಭಾವಿಸಿದ್ದರು. ಆದರೆ ಆತ ತನ್ನ ಪಕ್ಕದ ಮನೆಯ ಕಂದಮ್ಮನ ಮೇಲೆ ಅತ್ಯಾಚಾರ ಎಸೆಗಿದ್ದಾನೆ.
ಬಾಲಕಿ ಸಂಜೆ ಮನೆಗೆ ಬಂದಾಗ ಆಕೆಯ ಬಟ್ಟೆಯೆಲ್ಲಾ ರಕ್ತಮಯವಾಗಿದ್ದು, ಗುಪ್ತಾಂಗದಲ್ಲಿ ಕಾಣಿಸಿಕೊಂಡ ನೋವಿನಿಂದ ಅಳುತ್ತಾ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲ ವೈದ್ಯಕೀಯ ಪರೀಕ್ಷೆಯ ಬಳಿಕ ಆಕೆಯ ಪೋಷಕರೊಂದಿಗೆ ಕಳುಹಿಸಿದ್ದು, ಪ್ರಕರಣಕ್ಕೆ  ಸಂಬಂದಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗ್ತಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments