Publish Date: Thu, 14 Feb 2019 (09:48 IST)
Updated Date: Thu, 14 Feb 2019 (09:53 IST)
ಮಹಾರಾಷ್ಟ್ರ : ಪ್ರೀತಿಸುತ್ತಿದ್ದ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಮಾಡಿದ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ನಲ್ಲಿ ನಡೆದಿದೆ.
ಫೈಸಲ್(21) ಪ್ರೇಯಸಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ. ಈತ ಹಾಗೂ ಯುವತಿ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಯುವತಿ ಆತನಿಂದ ದೂರವಾಗಿದ್ದಳು. ಆಗ ಆತ ಅವರಿಬ್ಬರು ಜೊತೆಗಿದ್ದ ವಿಡಿಯೋವನ್ನು ಇಟ್ಟುಕೊಂಡು ಆಕೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಆದರೆ ಭಾನುವಾರ ಅವುಗಳನ್ನು ಕೊಡುವುದಾಗಿ ಹೇಳಿ ಯುವತಿಯನ್ನು ರಾತ್ರಿ ಲಾಡ್ಜ್ ಗೆ ಕರೆಸಿಕೊಂಡ ಆತ ಆಕೆಯನ್ನು ಕೂಡಿಹಾಕಿ ಅತ್ಯಾಚಾರ ನಡೆಸಿದ್ದಾನೆ.
ಮಂಗಳವಾರ ಆತನಿಂದ ತಪ್ಪಿಸಿಕೊಂಡ ಬಂದ ಯುವತಿ ನಡೆದ ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.