Select Your Language

Notifications

webdunia
webdunia
webdunia
webdunia

ಉಗ್ರರನ್ನು ಪೋಷಿಸುವ ಪಾಕ್‌ಗೆ ಮತ್ತಷ್ಟು ಪೆಟ್ಟುಕೊಟ್ಟ ಕೇಂದ್ರ: ಮೇಲ್‌ಗಳು, ಪಾರ್ಸೆಲ್‌ಗಳ ವಿನಿಮಯಕ್ಕೂ ಬ್ರೇಕ್‌

ಪಹಲ್ಗಾಮ್ ಭಯೋತ್ಪಾದಕ ದಾಳಿ

Sampriya

ನವದೆಹಲಿ , ಶನಿವಾರ, 3 ಮೇ 2025 (18:42 IST)
Photo Credit X
ನವದೆಹಲಿ: ಹಲ್ಗಾಮ್‌ ದಾಳಿಯ ಬಳಿಕ ಪಾಕಿಸ್ತಾನ ವಿರುದ್ಧ ಕೇಂದ್ರ ಸರ್ಕಾರವು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುತ್ತಿದೆ. ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಏಟು ನೀಡುತ್ತಲೇ ಇದೆ.

ಪಾಕಿಸ್ತಾನದಿಂದ ಬರುವ ಎಲ್ಲಾ ವರ್ಗದ ಮೇಲ್‌ಗಳು ಮತ್ತು ಪಾರ್ಸೆಲ್‌ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ

ಇದಕ್ಕೂ ಮುನ್ನ ಪಾಕಿಸ್ತಾನದಿಂದ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆಮದಾಗುವ ಎಲ್ಲಾ ಸರಕುಗಳ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಭಾರತ ನಿರ್ಬಂಧ ಹೇರಿರುವುದಾಗಿ ವಾಣಿಜ್ಯ ಸಚಿವಾಲಯವು ಅಧಿಸೂಚನೆ ಹೊರಡಿಸಿತ್ತು.

ವಿದೇಶಿ ವ್ಯಾಪಾರ ನೀತಿ 2023ರ ಅನ್ವಯ ಈ ಘೋಷಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರಲಿದೆ. ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಜನಿಕ ನೀತಿಯ ಹಿತದೃಷ್ಠಿಯಿಂದ ಈ ನಿರ್ಬಂಧ ಹೇರಲಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶಕರು ತಿಳಿಸಿದ್ದಾರೆ.

ಈ ನಿಷೇಧಕ್ಕೆ ಯಾವುದೇ ವಿನಾಯಿತಿ ಬೇಕಿದ್ದರೆ ಭಾರತ ಸರ್ಕಾರದ ಅನುಮೋದನೆ ಪಡೆಯಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ ಮೂವರನ್ನು ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋದಾ ಗಂಡನಿಗೆ ವಾಪಾಸ್‌ ಬರುವಾಗ ಕಾದಿತ್ತು ಶಾಕ್‌