Daily Horoscope
✕

ಮೋದಿ ಬಗ್ಗೆ ಕಾಂಗ್ರೆಸ್ನಿಂದ ಅವಹೇಳನಕಾರಿ ಟ್ವೀಟ್

Webdunia
ಮಂಗಳವಾರ, 19 ಅಕ್ಟೋಬರ್ 2021 (09:14 IST)
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ಕೆಪಿಸಿಸಿ ಸಾಮಾಜಿಕ ಜಾಲತಾಣದಿಂದ ಮಾಡಲಾಗಿರುವ ಅವಹೇಳನಕಾರಿ ಟ್ವೀಟ್ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.

ತಕ್ಷಣ ಈ ಟ್ವೀಟ್ ತೆಗೆದುಹಾಕಲು ಸೂಚನೆ ನೀಡಲಾಗಿದೆ. ಈ ಅಚಾತುರ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕಾಂಗ್ರೆಸ್ ಇಂತಹ ಪ್ರಮಾದವನ್ನು ಎಂದಿಗೂ ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಇಂದು (ಅಕ್ಟೋಬರ್ 17) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ಹೆಬ್ಬೆಟ್ ಗಿರಾಕಿ ಮೋದಿ’ ಎಂಬ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿತ್ತು. ಮೌನೇಂದ್ರ ಮೋದಿ ಎಂದು ಟ್ವೀಟ್ ಮಾಡಿತ್ತು. ಪೆಟ್ರೋಲ್ ಬೆಲೆ ಏರಿಕೆ, ಜನರನ್ನು ದೋಚಿ ಉದ್ಯಮಿಗಳ ಹೊಟ್ಟೆ ತುಂಬಿಸುವ ಮೋದಿ, ವಾಸ್ತವಗಳ ಮಾತನಾಡದ ಮೌನೇಂದ್ರ ಮೋದಿ ಇತ್ಯಾದಿ ವಿಚಾರಗಳ ವಿರುದ್ಧ ಬರೆಯುವಾಗ ಹೆಬ್ಬೆಟ್ ಗಿರಾಕಿ ಮೋದಿ ಎಂಬ ಹ್ಯಾಷ್ ಟ್ಯಾಗ್ ಬಳಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments