Select Your Language

Notifications

webdunia
webdunia
webdunia
webdunia

ಶಾಲೆಯ ಟಾಯ್ಲೆಟ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ!

ಶಾಲೆಯ ಟಾಯ್ಲೆಟ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ!
ಭೋಪಾಲ್ , ಭಾನುವಾರ, 24 ಜುಲೈ 2022 (13:15 IST)
ಭೋಪಾಲ್ : ಸರ್ಕಾರಿ ಶಾಲೆಯ ಶೌಚಾಲಯದಲ್ಲಿ ಎಂಟೂವರೆ ವರ್ಷದ ಬಾಲಕಿಯ ಮೇಲೆ ಅಲ್ಲಿನ ಕಾವಲುಗಾರನೊಬ್ಬ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ಭೋಪಾಲ್ನ ಖೋಫಿಜಾ ಪ್ರದೇಶದಲ್ಲಿ ನಡೆದಿದೆ.

ಲಕ್ಷ್ಮೀನಾರಾಯಣ ಧನಕ್ ಬಂಧಿತ ಆರೋಪಿ. ಈತ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಈತನನ್ನು 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬಂಧಿಸಲಾಗಿದೆ.

4ನೇ ತರಗತಿಯನ್ನು ಓದುತ್ತಿದ್ದ ವಿದ್ಯಾರ್ಥಿನಿಯು 6 ದಿನಗಳ ಹಿಂದೆ ಶಾಲೆಗೆ ಪ್ರವೇಶ ಪಡೆದಿದ್ದಳು. ಮಧ್ಯಾಹ್ನ ಊಟದ ಸಮಯದಲ್ಲಿ ಈಕೆ ಶೌಚಾಲಯಕ್ಕೆ ಹೋಗಿದ್ದಳು. ಆ ಸಮಯದಲ್ಲಿ ಅಲ್ಲೇ ಇದ್ದ ಆರೋಪಿ ಲಕ್ಷ್ಮೀನಾರಾಯಣ ಆಕೆಯನ್ನು ಶೌಚಾಲಯದೊಳಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. 

ಘಟನೆ ಬಳಿಕ ಲಕ್ಷ್ಮೀನಾರಾಯಣ ಪರಾರಿಯಾಗಿದ್ದಾನೆ. ಬಾಲಕಿ ಅಳುತ್ತಿರುವುದನ್ನು ಕಂಡು ಇತರ ವಿದ್ಯಾರ್ಥಿಗಳು ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್! ಸ್ಥಳೀಯರಲ್ಲಿ ಆತಂಕ