Publish Date: Thu, 16 Dec 2021 (14:53 IST)
Updated Date: Thu, 16 Dec 2021 (15:56 IST)
ಚೆನ್ನೈ : ಊಟದ ಬಿಡುವಿನಲ್ಲಿ ಮನೆಗೆ ಹೋಗಬೇಕಿದ್ದ ಬಾಲಕಿ ಶಾಲೆಯ ಅಡುಗೆ ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ದಿಂಡಿಗಲ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಊಟದ ಬಿಡುವಿನಲ್ಲಿ ಮನೆಗೆ ಹೋಗಬೇಕಿತ್ತು. ಆಕೆ ಮನೆಗೆ ಬಾರದೇ ಇದ್ದಾಗ ಪೋಷಕರು ಗಾಬರಿಗೊಂಡು ಶಾಲೆಗೆ ಧಾವಿಸಿದ್ದಾರೆ.
ಈ ಸಮಯದಲ್ಲಿ ಶಾಲೆಯ ಅಡುಗೆ ಕೋಣೆಯಲ್ಲಿ ಬಾಲಕಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತೀವ್ರವಾದ ಸುಟ್ಟ ಗಾಯಗಳಿಂದ ಬಾಲಕಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆಯಲ್ಲಿ ಮೃತ ಪಟ್ಟಿದ್ದಾಳೆ.
ಬಾಲಕಿಯ ಈ ಸ್ಥಿತಿಗೆ ಕಾರಣ ಏನು ಎಂಬುದು ನಿಖರವಾಗಿ ಪತ್ತೆಯಾಗಿಲ್ಲ. ಆದರೆ ಈ ಹಿಂದೆ ಬಾಲಕಿ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಳು ಎಂದು ತಿಳಿದು ಬಂದಿದೆ.