Select Your Language

Notifications

webdunia
webdunia
webdunia
webdunia

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಚಿಕ್ಕಬಳ್ಳಾಪುರ ಲವ್ ಸ್ಟೋರಿ

Sampriya

ಚಿಕ್ಕಬಳ್ಳಾಪುರ , ಶುಕ್ರವಾರ, 16 ಮೇ 2025 (18:55 IST)
Photo Credit X
ಚಿಕ್ಕಬಳ್ಳಾಪುರ: ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಪ್ರೀತಿಸಿ ಪ್ರೇಮವಿವಾಹವಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಇದೀಗ ತಮ್ಮ ಪ್ರೇಮವಿವಾಹಕ್ಕೆ ರಕ್ಷಣೆ ಕೊರಿ ನವಜೋಡಿ ಠಾಣೆ ಮೆಟ್ಟಿಲೇರಿದ್ದಾರೆ. ಈ ವಿವಾಹಕ್ಕೆ ಸಹಜವಾಗಿಯೇ ಪೋಷಕರ ವಿರೋಧ ವ್ಯಕ್ತವಾಗಿದೆ.

ಯಾಪಲಹಳ್ಳಿಯ ನಿವಾಸಿ ಹರೀಶ್ ಬಾಬು ಹಾಗೂ ಗುಡಿಬಂಡೆ ತಾಲೂಕಿನ ಸೋಮೇಶ್ವರ ಗ್ರಾಮದ ಯುವತಿ ನಜ್ಮಾ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಬ್ಬರದ್ದು ಬೇರೆ ಬೇರೆ ತಾಲೂಕಾದರೂ ಚಿಕ್ಕಬಳ್ಳಾಪುರ ನಗರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಆದ ಪರಿಷಯ ಸ್ನೇಹಕ್ಕೆ ತಿರುಗಿ ಪ್ರೀತಿಯಾಗಿದೆ.

ಇಬ್ಬರು ತಮ್ಮ ಪ್ರೀತಿಯ ವಿಚಾರವನ್ನು ಮನೆಯವರಿಗೆ ತಿಳಿಸಿದ್ದರು. ಆದರೆ ಮನೆಯವರು ಧರ್ಮದ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
ಇಬ್ಬರದ್ದೂ ಬೇರೆ ಬೇರೆ ಧರ್ಮವಾದ ಕಾರಣ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರೀತಿ ವಿಚಾರ ತಿಳಿಯುತ್ತಿದ್ದಂತೆ ಯುವತಿಯನ್ನ ಕೆಲಸಕ್ಕೆ ಕಳುಹಿಸದೇ ಮನೆಯಲ್ಲೇ ಉಳಿಸಿಕೊಂಡಿದ್ದಾರೆ. ವಿರೋಧದ ನಡುವೆಯೇ ಮನೆಯಿಂದ ಹೊರಬಂದ ನಜ್ಮಾ, ಹರೀಶ್ ಬಾಬು ಜೊತೆ ವಿವಾಹವಾಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Covid 19: ಈ ದೇಶದಲ್ಲಿ ಹೆಚ್ಚುತ್ತಿದೆ ಕೋವಿಡ್‌ ಪ್ರಕರಣ, ಭಾರತದ ಮೇಲೂ ಬೀಳುತ್ತಾ ಪರಿಣಾಮ