ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

Sampriya
ಸೋಮವಾರ, 24 ನವೆಂಬರ್ 2025 (14:13 IST)
ಲಕ್ನೋ: ಧಾರ್ಮಿಕ ಪವಿತ್ರ ಕೇಂದ್ರ ಅಯೋಧ್ಯೆಯಲ್ಲಿ ಮಂಗಳವಾರ ಐತಿಹಾಸಿಕ ಕಾರ್ಯಕ್ರಮ ನಡೆಯಲಿದೆ.  ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮಧ್ಯಾಹ್ನ ಸುಮಾರು 11:52ರಿಂದ 12:35ರ ಶುಭ ಮುಹೂರ್ತದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. 191 ಅಡಿ ಎತ್ತರದ ರಾಮ ಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲಾಗುತ್ತಿದೆ.

ಧ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು ಇರಿಸಲಾಗಿದೆ.  ಈ ದೈವಿಕ ಧ್ವಜವನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ತಯಾರಿಸಲಾಗಿದೆ. ಧಾರ್ಮಿಕ ಮಹತ್ವವುಳ್ಳ ವಿಶಿಷ್ಟವಾದ ಮರದ ಚಿತ್ರವನ್ನು ಸಹ ಧ್ವಜದ ಮೇಲೆ ಚಿತ್ರಿಸಲಾಗಿದೆ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಭಾರತದ ವಿವಿಧೆಡೆಯ ಆರು ಸಾವಿರ ಪ್ರಮುಖ ಗಣ್ಯರು ಭಾಗವಹಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಭಾರಿ ಸಿದ್ದತೆ ನಡೆದಿದೆ.

ಭದ್ರತೆಯ ದೃಷ್ಠಿಯಿಂದ ಸೋಮವಾರದಿಂದ ಬುಧವಾರದವರೆಗೂ ದರ್ಶನಕ್ಕೆ ನಿರ್ಬಂಧ ವಿಧಿಸಿದೆ. ಇನ್ನು ಇಡೀ ಅಯೋಧ್ಯೆಯನ್ನು ಮಧುವಣಗಿತ್ತಿಯಂತೆ ಸಿದ್ಧಗೊಳಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments