Select Your Language

Notifications

webdunia
webdunia
webdunia
webdunia

ರಾಷ್ಟ್ರ ಒಡೆಯಲು ಬಯಸುತ್ತಿದ್ದವರಿಗೆ ಮಹಾರಾಷ್ಟ್ರದ ಜನರಿಂದ ತಕ್ಕ ಪಾಠ: ಕಂಗನಾ ಲೇವಡಿ

BJP MP Kangana Ranaut,

Sampriya

ಮುಂಬೈ , ಸೋಮವಾರ, 25 ನವೆಂಬರ್ 2024 (15:03 IST)
Photo Courtesy X
ಮುಂಬೈ:ಮಹಾರಾಷ್ಟ್ರ ವಿಧಾನಸಭೆ ಫಲಿತಾಂಶದ ಬಳಿಕ ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್‌ ಪ್ರತಿಕ್ರಿಯಸಿದ್ದು, ದೇಶ ಒಡೆಯುವ ಮಾತನಾಡುತ್ತಿದ್ದವರಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಗೆಲುವಿನ ಕುರಿತು ಮಾತನಾಡಿರುವ ಅವರು, ಮಹಾರಾಷ್ಟ್ರದ ಜನರು ಅಭಿವೃದ್ಧಿ ಮತ್ತು ಸ್ಥಿರ ಸರ್ಕಾರಕ್ಕೆ ಮತ ನೀಡಿದ್ದಾರೆ. ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಬಿಜೆಪಿ ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಹೇಳಿದರು.

ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದ ಗೆಲುವಿಗೆ ಕಾರಣವಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಂಗನಾ ಅಭಿನಂದನೆ ತಿಳಿಸಿದರು.

ಚುನಾವಣಾ ಪ್ರಚಾರದ ವೇಳೆ ಪ್ರತಿಯೊಂದು ಮಗುವು ಮೋದಿ–ಮೋದಿ ಎಂದು ಜಪಿಸುವುದನ್ನು ನಾನು ನೋಡಿದ್ದೆ. ಪ್ರಪಂಚದಲ್ಲಿ ಪ್ರಧಾನಿ ಮೋದಿ ಅವರು ಅತ್ಯುನ್ನತ ನಾಯಕರಾಗಿದ್ದಾರೆ. ಬಿಜೆಪಿ ಒಂದು ಬ್ರಾಂಡ್‌ ಆಗಿದೆ. ಇಂದು, ದೇಶದ ಜನರು ಆ ಬ್ರಾಂಡ್‌ನಲ್ಲಿ ನಂಬಿಕೆ ಹೊಂದಿದ್ದಾರೆ’ ಎಂದು ಕಂಗನಾ ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ  ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ 235 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮಹಾವಿಕಾಸ ಆಘಾಡಿ (ಎಂವಿಎ) ಮೈತ್ರಿಕೂಟವು 49 ಕ್ಷೇತ್ರ ಹಾಗೂ ಪಕ್ಷೇತರರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸತ್ ಚಳಿಗಾಲ ಅಧಿವೇಶನದಲ್ಲಿ ಪ್ರತಿಪಕ್ಷಗಳ ಗದ್ದಲ: ಗುರುವಾರಕ್ಕೆ ಕಲಾಪ ಮುಂದೂಡಿಕೆ