ಮುಂಬೈ : ಪಾದಾಚಾರಿಗಳ ಮೇಲ್ಸೇತುವೆ ಕುಸಿದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮಹಾರಾಷ್ಟ್ರದ ಚಂದ್ರಾಪುರ ಬಲ್ಲಾರಶಾ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
									
			
			 
 			
 
 			
			                     
							
							
			        							
								
																	ಸುಮಾರು 60 ಅಡಿ ಎತ್ತರದ ಫುಟ್ಓವರ್ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದ್ದು, ಹಲವು ಪ್ರಯಾಣಿಕರು ಸೇತುವೆಯಿಂದ ರೈಲ್ವೇ ಹಳಿ ಮೇಲೆ ಬಿದ್ದಿದ್ದಾರೆ. ಘಟನೆಯಿಂದ 20ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. 
									
										
								
																	ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.