Select Your Language

Notifications

webdunia
webdunia
webdunia
webdunia

ನಾಯಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ !

ನಾಯಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ !
ಪಾಟ್ನಾ , ಸೋಮವಾರ, 20 ಮಾರ್ಚ್ 2023 (10:35 IST)
ಪಾಟ್ನಾ : ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾದ ಫುಲ್ವಾರಿ ಶರೀಫ್ನ ಫೈಸಲ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಈ ಭೀಕರ ಕೃತ್ಯದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
 
ಸಿಸಿಟಿವಿ ದೃಶ್ಯಾವಳಿಯಲ್ಲಿ ಅನಾಮಿಕನೊಬ್ಬ ಕಾಲೋನಿಯಲ್ಲಿ ನಾಯಿಯೊಂದಿಗೆ ಅಸಹಜ ಕೃತ್ಯವನ್ನು ಬಹಿರಂಗವಾಗಿ ಮಾಡುತ್ತಿರುವುದು ಕಂಡುಬಂದಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ NGOವೊಂದು ದೂರು ನೀಡಿದೆ.  ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪಾಟ್ನಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಮೋದಿಯ ಅತಿದೊಡ್ಡ TRP: ಮಮತಾ ಬ್ಯಾನರ್ಜಿ