Daily Horoscope

Select Your Language

Notifications

webdunia
webdunia
webdunia
webdunia

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

Rape Case
ಲಕ್ನೋ: ಸಂಬಂಧಿ ಮೇಲೆ ನಿರಂತರ ಅತ್ಯಾಚಾರ ಎಸಗಿ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರಕರಣ ಸಂಬಂಧ ಕಾಮುಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಬಲ್ಲಿಯಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆ ಮೇಲೆ ಅದೇ ಊರಿನ 40 ವರ್ಷದ ವ್ಯಕ್ತಿ ನಿರಂತರ ಅತ್ಯಚಾರ ಎಸಗಿದ್ದಾನೆ. ಆಕೆಯ ಆಕ್ಷಾಪಾರ್ಹ ವೀಡಿಯೋಗಳನ್ನು ರೆಕಾರ್ಡ್‌ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾನೆ. ಅಲ್ಲದೇ ಆಕೆಯ ಕುಟುಂಬದ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. 

ದೂರಿನ ಆಧಾರದಲ್ಲಿ ಜ.3 ರಂದು ಆರೋಪಿಯ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಐಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಬಲಿಯಾ ಎಸ್‌ಪಿ ಓಂವೀರ್ ಸಿಂಗ್ ಅವರು ನೀಡಿದ ಸುಳಿವಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ