Publish Date: Sun, 10 Feb 2019 (10:06 IST)
Updated Date: Sun, 10 Feb 2019 (10:08 IST)
ಒಡಿಶಾ : ಅಪ್ರಾಪ್ತ ವಿದ್ಯಾರ್ಥಿಯೊಬ್ಬ ತನ್ನ ತರಗತಿಯ ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ಸಂತ್ರಸ್ತ ವಿದ್ಯಾರ್ಥಿನಿ 6ನೇ ತರಗತಿಯಲ್ಲಿ ಕಲಿಯುತ್ತಿದ್ದು, ಆಕೆಯನ್ನು ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ 6 ತಿಂಗಳ ಗರ್ಭಿಣಿ ಎಂಬುದು ಬೆಳಕಿಗೆ ಬಂದಿದೆ. ಈ ಬಗ್ಗೆ ಆಕೆಯ ಬಳಿ ವಿಚಾರಿಸಿದಾಗ ತನ್ನ ತರಗತಿಯ ಸಹಪಾಠಿಯೇ ಅತ್ಯಾಚಾರ ಮಾಡಿರುವ ವಿಷಯವನ್ನು ವಿದ್ಯಾರ್ಥಿನಿ ಬಹಿರಂಗಪಡಿಸಿದ್ದಾಳೆ.
ಸದ್ಯಕ್ಕೆ ಮುಖ್ಯೋಪಾಧ್ಯಾಯ ನೀಡಿದ ದೂರಿನ ಮೇರೆಗೆ ಬಾಲಕನನ್ನು ತನಿಖೆಗೆ ಒಳಪಡಿಸಿ ಬಳಿಕ ಜಿಲ್ಲೆಯ ರಿಮ್ಯಾಂಡ್ ಹೋಮ್‍ಗೆ ಕಳುಹಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.