Publish Date: Thu, 18 May 2023 (09:04 IST)
Updated Date: Thu, 18 May 2023 (09:39 IST)
ನವದೆಹಲಿ : ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣ ಮಾಡುವಾಗ ಬೀಡಿ ಸೇದಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್ಫ್ಲೈಟ್ನಲ್ಲಿ ಬೀಡಿ ಸೇದಿ ನಿಯಮ ಉಲ್ಲಂಘಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈತ ರಾಜಸ್ಥಾನದಿಂದ ಮೊದಲ ಬಾರಿಗೆ ಪ್ರಯಾಣಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ವಾರ್ ಪ್ರದೇಶದ 56 ವರ್ಷದ ವ್ಯಕ್ತಿ, ಮಂಗಳವಾರ ಅಹಮದಾಬಾದ್ನಿಂದ ವಿಮಾನ ಪ್ರಯಾಣ ಕೈಗೊಂಡಿದ್ದರು. ಹಾರಾಟದ ವೇಳೆ ವಿಮಾನದಲ್ಲಿ ಪ್ರಯಾಣಿಕ ಶೌಚಾಲಯಕ್ಕೆ ಹೋಗಿ ಧೂಮಪಾನ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರೈಲು ಪ್ರಯಾಣದ ವೇಳೆ ಶೌಚಾಲಯದಲ್ಲಿ ಧೂಮಪಾನ ಮಾಡಿದ್ದೆ. ವಿಮಾನದಲ್ಲಿಯೂ ಅದೇ ರೀತಿ ಮಾಡಿದೆ ಎಂದು ಪ್ರಯಾಣಿಕ ತಿಳಿಸಿದ್ದಾನೆ. ಇತರರ ಜೀವಕ್ಕೆ ಅಪಾಯ ತಂದೊಡ್ಡಿದ ಆರೋಪದ ಮೇಲೆ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.