ಡಿಜೆ ಸೌಂಡ್ ನಿಲ್ಲಿಸಲು ಹೇಳಿದ್ದಕ್ಕೆ ಗರ್ಭಿಣಿ ಮೇಲೆ ಗುಂಡು ಹಾರಿಸಿ ಹತ್ಯೆ!

Webdunia
ಬುಧವಾರ, 5 ಏಪ್ರಿಲ್ 2023 (14:53 IST)
ನವದೆಹಲಿ : ಗರ್ಭಿಣಿಯೊಬ್ಬಳು ಡಿಜೆ ಸಂಗೀತದ ಸೌಂಡ್ ಅನ್ನು ನಿಲ್ಲಿಸುವಂತೆ ಹೇಳಿದ್ದಕ್ಕೆ ನೆರೆಯವರು ಆಕೆ ಮೇಲೆ ಗುಂಡು ಹಾರಿಸಿ ಗರ್ಭಪಾತವಾದ ಘಟನೆ ವಾಯುವ್ಯ ದೆಹಲಿಯಲ್ಲಿ ನಡೆದಿದೆ.

ಸಿರಸ್ಪುರದ ನಿವಾಸಿ ರಂಜು ಗುಂಡು ತಗುಲಿದ ಮಹಿಳೆ. ರಂಜು ಮನೆಯ ನೆರೆ ಮನೆಯಲ್ಲಿ ಸಮಾರಂಭವೊಂದು ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಮನೆಯ ಮಾಲೀಕ ಹರೀಶ್ ಡಿಜೆಯನ್ನು ಕರೆಸಿದ್ದ. ಜೋರಾಗಿ ಮ್ಯೂಸಿಕ್ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಗರ್ಭಿಣಿ ರಂಜು ಮನೆಯ ಬಾಲ್ಕನಿಗೆ ಬಂದು ಹರೀಶ್ಗೆ ಮ್ಯೂಸಿಕ್  ನಿಲ್ಲಿಸುವಂತೆ ಕೇಳಿಕೊಂಡಿದ್ದಾಳೆ.

ಇದರಿಂದ ಕೋಪಕೊಂಡ ಹರೀಶ್ ತನ್ನ ಸ್ನೇಹಿತ ಅಮಿತ್ ಬಳಿಯಿದ್ದ ಗನ್ನಿಂದ ಗುಂಡು ಹಾರಿಸಿದ್ದಾನೆ. ಈ ವೇಳೆ ರಂಜು ಕುತ್ತಿಗೆಗೆ ತಗುಲಿದೆ. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗರ್ಭಿಣಿಯ ಮೇಲೆ ಗುಂಡು ಹಾರಿಸಿದ ಹರೀಶ್ ಮತ್ತು ಆತನ ಸ್ನೇಹಿತ ಅಮಿತ್ ಎಂಬಾತನನ್ನು ಬಂಧಿಸಿದ್ದಾರೆ. ಹರೀಶ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ಅಮಿತ್ ಮೊಬೈಲ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾನೆ.

ರಂಜುವಿನ ಪತಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಕುಟುಂಬವು ಬಿಹಾರಕ್ಕೆ ಸೇರಿದ್ದು, ಇಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದೆ. ಘಟನೆ ವೇಳೆ ಮಹಿಳೆಯ ಕುತ್ತಿಗೆಗೆ ಗುಂಡೇಟು ತಗುಲಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೀರಾ ಸಾರ್ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರವೇನು ಗೊತ್ತಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಭಾರತದ ಅಕ್ಕಿಗೆ ಟ್ರಂಪ್ ಸುಂಕ: ನಮ್ಮದೇಶದ ಬಡವರಿಗೆ ಕೊಡ್ತೀವಿ ಬಿಡ್ರೀ ಎಂದ ಪಬ್ಲಿಕ್

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments