Select Your Language

Notifications

webdunia
webdunia
webdunia
webdunia

ಸಾಮಾಜಿಕ ಮಾಧ್ಯಮದಲ್ಲಿ ಖಾಸಗಿ ಫೋಟೊ ಪೋಸ್ಟ್; ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಸಾಮಾಜಿಕ ಮಾಧ್ಯಮದಲ್ಲಿ ಖಾಸಗಿ ಫೋಟೊ ಪೋಸ್ಟ್; ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಕೋಲ್ಕತ್ತಾ , ಬುಧವಾರ, 18 ನವೆಂಬರ್ 2020 (06:22 IST)
ಕೋಲ್ಕತ್ತಾ : ಸಾಮಾಜಿಕ ಮಾಧ್ಯಮದಲ್ಲಿ ತನ್ನ ಖಾಸಗಿ ಫೋಟೊಗಳನ್ನು ಪೋಸ್ಟ್ ಮಾಡಿದ  ಹಿನ್ನಲೆಯಲ್ಲಿ ಮುಜುಗರಕ್ಕೊಳಗಾದ  11ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಗೆ  ಸಾಮಾಜಿಕ ಮಾಧ್ಯಮದಲ್ಲಿ ಖಾಸಗಿ ಫೋಟೊಗಳನ್ನು ಪೋಸ್ಟ್ ಮಾಡುವುದಾಗಿ ಬೆದರಿಕೆ ಬರುತ್ತಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಅವರು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಕೊನೆಗೆ ಆಕೆಯ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಲಾಗಿದ್ದು, ಇದನ್ನು ಆಕೆಯ ಸ್ನೇಹಿತರು, ಸಂಬಂಧಿಗಳು ನೋಡಿದ್ದಾರೆ.
ಇದರಿಂದ ಮುಜುಗರಕ್ಕೊಳಗಾದ ಹುಡುಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾರಣಕ್ಕೆ ತಂದೆಯ ಕತ್ತು ಹಿಸುಕಿ ಕೊಂದ ಮಗ