Select Your Language

Notifications

webdunia
webdunia
webdunia
webdunia

ಆರು ವರ್ಷದ ಬಾಲಕಿಯ ಮೃತದೇಹದ ಮೇಲೆ ಅತ್ಯಾಚಾರ ಎಸಗಿದ ಕಾಮುಕ

ಆರು ವರ್ಷದ ಬಾಲಕಿಯ ಮೃತದೇಹದ ಮೇಲೆ ಅತ್ಯಾಚಾರ ಎಸಗಿದ ಕಾಮುಕ
ಡೆಹ್ರಾಡೂನ್ , ಮಂಗಳವಾರ, 30 ಏಪ್ರಿಲ್ 2019 (07:37 IST)
ಡೆಹ್ರಾಡೂನ್ : ಆರು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿದ್ದಲ್ಲದೇ ಆಕೆಯ ಮೃತದೇಹದ ಮೇಲೆ ಅತ್ಯಾಚಾರ ಮಾಡಿದ ಅಮಾನವೀಯ ಘಟನೆ ಉತ್ತರಾಖಂಡ್ ನಲ್ಲಿ ನಡೆದಿದೆ.




ಪೋಷಕರು ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದು, ಈ ವೇಳೆ ತನ್ನ ಗೆಳೆಯರ ಜೊತೆ ಆಟವಾಡುತ್ತಿದ್ದ ಬಾಲಕಿಯನ್ನು ಮನೆ ಬಳಿ ಇದ್ದ ಪೌಲ್ಟ್ರಿ ಫಾರಂ ಸೆಕ್ಯುರಿಟಿ ಗಾರ್ಡ್ ಅಪಹರಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ ನಡೆಸಲು ಮುಂದಾಗಿದ್ದಾನೆ. ಈ ವೇಳೆ ಬಾಲಕಿ ಕಿರುಚಾಡಿದ್ದಕ್ಕೆ ಕೋಪಗೊಂಡು ಆಕೆಯನ್ನ ಕೊಲೆ ಮಾಡಿದ್ದಾನೆ. ಬಳಿಕ ಬಾಲಕಿಯ ಶವದ ಮೇಲೆಯೇ ಅತ್ಯಾಚಾರವೆಸಗಿದ್ದಾನೆ.


ಇತ್ತ ಮನೆಯವರು ಬಾಲಕಿ ಕಾಣದಿದ್ದಾಗ ಆಕೆಗಾಗಿ ಹುಡುಕಾಟ ನಡೆಸಿದಾಗ ಆಕೆಯ ಶವ ಕಾಡಿನಲ್ಲಿ ಪತ್ತೆಯಾಗಿದೆ. ತಕ್ಷಣ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಆರೋಪಿ  ಪೌಲ್ಟ್ರಿ ಫಾರಂ ಸೆಕ್ಯುರಿಟಿ ಗಾರ್ಡ್  ಎಂಬುದಾಗಿ ತಿಳಿದುಬಂದಿದ್ದ ಕಾರಣ ಆತನನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಹಾಸನದ ಜಿಲ್ಲಾಧಿಕಾರಿಯ ವರ್ಗಾವಣೆ ಆಗ್ರಹಿಸಿದ ಸಚಿವ ರೇವಣ್ಣ. ಕಾರಣವೇನು ಗೊತ್ತಾ?