ತಾಯಿಗೆ ತಾನೇ ಮುಂದೆ ನಿಂತು ಮರುಮದುವೆ ಮಾಡಿಸಿದ ಮಗ

Webdunia
ಬುಧವಾರ, 25 ಜನವರಿ 2023 (13:03 IST)
ಮುಂಬೈ : ಸಮಾಜದ ಕಟ್ಟುಪಾಡುಗಳಿಗೆ ಶೆಡ್ಡು ಹೊಡೆದು ವ್ಯಕ್ತಿಯೊಬ್ಬ ತಾನೇ ಮುಂದೆ ನಿಂತು ತನ್ನ ವಿಧವೆ ತಾಯಿ ಮರುಮದುವೆ ಮಾಡಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಯುವರಾಜ್ ಶೆಲೆ ಎಂಬಾತ 5 ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆಯನ್ನು ಕಳೆದುಕೊಂಡಿದ್ದ. ಈತನ ತಾಯಿ ಪತಿ ಸಾವಿನಿಂದ ನೊಂದುಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. 45 ವಯಸ್ಸಿನ ತಾಯಿಗೆ ಸಂಗಾತಿಯ ಅಗತ್ಯವನ್ನು ಅರಿತ ಯುವರಾಜ್, ವರನನ್ನು ಹುಡುಕಿ ತಾನೇ ಮುಂದೆ ನಿಂತು ಮರುಮದುವೆ ಮಾಡಿಸಿದ್ದಾರೆ.

ನಾನು ಕೇವಲ 18 ವರ್ಷದವನಾಗಿದ್ದಾಗ ನನ್ನ ತಂದೆಯನ್ನು ಕಳೆದುಕೊಂಡೆ. ತಂದೆಯ ಸಾವು ನನಗೆ ಮತ್ತು ತಾಯಿಗೆ ದೊಡ್ಡ ಆಘಾತ ನೀಡಿತು. ನನ್ನ ತಾಯಿ ಒಂಟಿತನ ಎದುರಿಸಬೇಕಾಯಿತು. ಆಕೆ ಮಾನಸಿಕವಾಗಿ ತುಂಬಾ ಕುಗ್ಗಿದ್ದರು.

ನನ್ನ ತಾಯಿ ನನ್ನ ತಂದೆಯೊಂದಿಗೆ ಮದುವೆಯಾಗಿ ಸುಮಾರು 25 ವರ್ಷಗಳಾಗಿವೆ. ಒಬ್ಬ ಗಂಡಸು ತನ್ನ ಹೆಂಡತಿಯನ್ನು ಕಳೆದುಕೊಂಡರೆ, ಅವನು ಮರುಮದುವೆಯಾಗುವುದು ಸಹಜ ಎಂದು ಸಮಾಜ ಭಾವಿಸುತ್ತದೆ. ಅದೇ ನಂಬಿಕೆಯು ಮಹಿಳೆಗೆ ಏಕೆ ಅನ್ವಯಿಸುವುದಿಲ್ಲ ಎಂಬುದು ನನ್ನ ಪ್ರಶ್ನೆಯಾಗಿತ್ತು. ನಾನು ತಾಯಿಯನ್ನು ಮರುಮದುವೆಯಾಗುವಂತೆ ಮನವೊಲಿಸಿದೆ ಎಂದು ಯುವರಾಜ್ ಹೇಳಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮುಂದಿನ ಸುದ್ದಿ
Show comments