ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಮತ್ತೆ 4 ಪ್ರಮುಖ ಆರೋಪಿಗಳನ್ನು ಅರೆಸ್ಟ್ ಮಾಡಿದೆ.
ತನಿಖೆ ಪ್ರಮುಖ ಘಟ್ಟದಲ್ಲಿರುವಾಗ ಇದೀಗ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ ನಾಲ್ಕು ಪ್ರಮುಖ ಆರೋಪಿಗಳನ್ನು ಎನ್ ಐಎ ತನ್ನ ವಶಕ್ಕೆ ಪಡೆದಿದೆ ಎನ್ನಲಾಗಿದೆ.
ಬಂಧಿತರನ್ನು ಜಮ್ಮು ಮತ್ತು ಕಾಶ್ಮೀರದ ಡಾ. ಮುಜಮ್ಮಿಲ್ ಶಕೀಲ್ ಗನೈ, ಡಾ. ಅದೀಲ್ ಅಹ್ಮದ್ ರಾಥರ್ ಮತ್ತು ಮುಫ್ತಿ ಇರ್ಫಾನ್ ಅಹ್ಮದ್ ವಾಗೆ ಮತ್ತು ಉತ್ತರ ಪ್ರದೇಶದ ಡಾ. ಶಾಹೀನ್ ಸಯೀದ್ ಎಂದು ಗುರುತಿಸಲಾಗಿದೆ. ಈ ಮೂಲಕ ದೆಹಲಿ ಸ್ಫೋಟ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಪಟಿಯಾಲ ಹೌಸ್ ನ್ಯಾಯಾಲಯದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರ ಆದೇಶದ ಮೇರೆಗೆ ನಾಲ್ವರು ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಪೊಲೀಸರಿಂದ ವಶಕ್ಕೆ ಪಡೆಯಲಾಗಿದೆ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿದೆ.