ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಗುರುವಾರ ನಡೆದ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಒಬ್ಬ ಸೈನಿಕ ಹುತಾತ್ಮರಾಗಿದ್ದಾರೆ.
ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಭೀಕರ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಗಂಭೀರ ಗಾಯಗೊಂಡಿದ್ದ ಸಿಬ್ಬಂದಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ವೈಟ್ ನೈಟ್ ಕಾರ್ಪ್ಸ್ ಪೋಸ್ಟ್ ಮಾಡಿದೆ.
ಕಣಿವೆಯಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ನಾಲ್ವರು ಭಯೋತ್ಪಾದಕರು ಈ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಮೂರರಿಂದ ನಾಲ್ಕು ಭಯೋತ್ಪಾದಕರ ಗುಂಪಿನ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಪಡೆದ ನಂತರ ಜಂಟಿ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು (CASO) ಪ್ರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.