Select Your Language

Notifications

webdunia
webdunia
webdunia
webdunia

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: 8 ಜನ ಸಜೀವದಹನ!

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: 8 ಜನ ಸಜೀವದಹನ!
ಚೆನ್ನೈ , ಗುರುವಾರ, 23 ಮಾರ್ಚ್ 2023 (09:50 IST)
ಚೆನ್ನೈ : ಪಟಾಕಿ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ ಉಂಟಾಗಿ 8 ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಾಂಚೀಪುರಂನಲ್ಲಿ ನಡೆದಿದೆ.

ಬುಧವಾರ ಮಧ್ಯಾಹ್ನದ ವೇಳೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯಲ್ಲಿ ಸುಮಾರು 25 ಜನರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ವರದಿಗಳ ಪ್ರಕಾರ ಪಟಾಕಿಗಳನ್ನು ಒಣಗಲು ಬಿಸಿಲಿಗೆ ಹಾಕಿದ್ದಾಗ ಬೆಂಕಿ ಹುಟ್ಟಿಕೊಂಡಿದೆ. ಬಳಿಕ ಬೆಂಕಿ ಇಡೀ ಕಾರ್ಖಾನೆಗೆ ಹರಡಿಕೊಂಡಿದೆ. ಈ ವೇಳೆ ಕಾರ್ಮಿಕರು ಕಾರ್ಖಾನೆಯೊಳಗೆ ಸಿಲುಕಿಕೊಂಡಿದ್ದು, ಹಲವರ ಸಾವು ಸಂಭವಿಸಿದೆ.

ಘಟನೆಗೆ ಸಂಬಂಧಪಟ್ಟಂತೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಸಿಗುತ್ತಲೇ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯಲ್ಲಿ 19 ಜನರಿಗೆ ಸುಟ್ಟ ಗಾಯಗಳಗಿದ್ದು, ಅವರ ಪೈಕಿ 11 ಜನರನ್ನು ಕಾಂಚೀಪುರಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ 8 ಗಾಯಾಳುಗಳನ್ನು ಬೇರೆ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಎಸ್.ಎಂ ಕೃಷ್ಣರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ