Select Your Language

Notifications

webdunia
webdunia
webdunia
webdunia

ನಿಂತಿದ್ದ ಬಸ್‍ಗೆ ಡಿಕ್ಕಿ ಹೊಡೆದು ಟ್ರಕ್ ಸಾಕಷ್ಟು ಮಂದಿ ದುರ್ಮರಣ!

webdunia
ಲಕ್ನೋ , ಶನಿವಾರ, 3 ಸೆಪ್ಟಂಬರ್ 2022 (10:36 IST)
ಲಕ್ನೋ  : ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ.

ಬಾರಾಬಂಕಿಯ ಮಹುಂಗುಪುರ ಬಳಿ ಡಬಲ್ ಡೆಕ್ಕರ್ ಬಸ್ಗೆ ಹಿಂದಿನಿಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ನೇಪಾಳಿ ವಲಸೆ ಕಾರ್ಮಿಕರು ಡಬಲ್ ಡೆಕ್ಕರ್ ಬಸ್ನಲ್ಲಿ ಗೋವಾಕ್ಕೆ ತೆರಳುತ್ತಿದ್ದಾಗ ಅದರ ಒಂದು ಟೈರ್ ಪಂಕ್ಚರ್ ಆಗಿದೆ.

ನಂತರ ಬಸ್ಸಿನ ಚಾಲಕ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಟೈರ್ ಬದಲಾಯಿಸುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಬಸ್ಸಿನಲ್ಲಿದ್ದ ಸುಮಾರು 60 ಪ್ರಯಾಣಿಕರಲ್ಲಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಇದೀಗ ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಾರಾಬಂಕಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಆರು ಗಾಯಾಳುಗಳನ್ನು ಲಕ್ನೋ ಟ್ರಾಮಾ ಸೆಂಟರ್ಗೆ ಕಳುಹಿಸಿದ್ದಾರೆ ಎಂದು ಬರಾಬನಿ ಹಿರಿಯ ಪೊಲೀಸ್ ಅಧಿಕಾರಿ ಪೂರ್ಣೇಂದು ಸಿಂಗ್ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾಶ್ಮೀರಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ