Select Your Language

Notifications

webdunia
webdunia
webdunia
webdunia

ಜನರ ಮೇಲೆ ಹರಿದ ಟ್ರಕ್! 6 ಮಂದಿ ದುರ್ಮರಣ, 10 ಮಂದಿಗೆ ಗಾಯ

ಜನರ ಮೇಲೆ ಹರಿದ ಟ್ರಕ್!  6 ಮಂದಿ ದುರ್ಮರಣ, 10 ಮಂದಿಗೆ ಗಾಯ
ಭೋಪಾಲ್ , ಸೋಮವಾರ, 5 ಡಿಸೆಂಬರ್ 2022 (09:38 IST)
ಭೋಪಾಲ್ : ಬಸ್ಗಾಗಿ ಕಾಯುತ್ತಾ ನಿಲ್ದಾಣದಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ವೇಗವಾಗಿ ಬಂದ ಟ್ರಕ್ ಹರಿದು 6 ಮಂದಿ ಮೃತಪಟ್ಟಿರುವ ದುರಂತ ಘಟನೆ ಮಧ್ಯಪ್ರದೇಶದ ರತ್ಲಮ್ ಜಿಲ್ಲೆಯಲ್ಲಿ ನಡೆದಿದೆ.
 
ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಎಂಟು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿಲ್ಲಾಧಿಕಾರಿ ನರೇಂದ್ರ ಕುಮಾರ್ ಸೂರ್ಯವಂಶಿ ತಿಳಿಸಿದ್ದಾರೆ.

ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕ್ರಿಕೆಟ್ನಲ್ಲೂ ಮೀಸಲಾತಿ ತರಬೇಕು : ಚೇತನ್