ಜ್ಞಾನವ್ಯಾಪಿ ಮಸೀದಿ ವಿವಾದಕ್ಕೆ ಮಹತ್ವದ ತಿರುವು?

Webdunia
ಮಂಗಳವಾರ, 13 ಸೆಪ್ಟಂಬರ್ 2022 (13:06 IST)
ಲಕ್ನೋ : ಜ್ಞಾನವ್ಯಾಪಿ ಮಸೀದಿ ವಿವಾದಕ್ಕೆ ಮಹತ್ವದ ತಿರುವು ಸಿಕ್ಕಿದೆ. ಹಿಂದೂಗಳಿಗೆ ಮೊದಲ ಹಂತದ ಜಯ ಲಭಿಸಿದೆ.

ಮಸೀದಿಯ ಆವರಣದಲ್ಲಿ ಪತ್ತೆಯಾಗಿದ್ದ ಶಿವಲಿಂಗ ಮತ್ತು ಶೃಂಗಾರಗೌರಿ ಪೂಜೆಗೆ ಅನುಮತಿ ಕೋರಿ ಐದು ಮಂದಿ ಮಹಿಳೆಯರು ಸಲ್ಲಿಸಿದ್ದ ಅರ್ಜಿಗಳು ವಿಚಾರಣೆಗೆ ಯೋಗ್ಯವಾಗಿವೆ ಎಂದು ವಾರಣಾಸಿ ಜಿಲ್ಲಾ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.

1991ರ ಪೂಜಾ ಸ್ಥಳಗಳ ಕಾಯ್ದೆಯ ಪ್ರಕಾರ ಈ ಜಾಗದಲ್ಲಿ ಪೂಜೆ ಮಾಡಲು ಸಾಧ್ಯವಿಲ್ಲ ಎಂದು ಮಸೀದಿ ಪರ ಅರ್ಜಿದಾರರು ವಾದ ಮಾಡಿದ್ದರು.

ಆದರೆ ನ್ಯಾ. ಎಕೆ ವೈಷ್ಣವ್ ಈ ವಾದವನ್ನು ಪರಿಗಣಿಸದೇ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ನೀಡುವುಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಒಪ್ಪಿಗೆ ನೀಡಿ ಮಸೀದಿ ಪರ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಯೋಗ್ಯ ಎಂಬ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಕೋರ್ಟ್ ಮಸೀದಿ ಒಳಗಡೆ ಪೂಜೆಗೆ ಅವಕಾಶ ನೀಡಬೇಕಾ? ಬೇಡವೋ ಎಂಬ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಮುಂದಿನ ಅರ್ಜಿಯ ವಿಚಾರಣೆ ಸೆ.22 ರಂದು ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಡ ಅನ್ನಕ್ಕಾಯ್ತದಾ.. ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ ಪಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುಲು ಕೊನೆ ದಿನಾಂಕ, ಹೇಗೆ ನೋಡಿ

ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಶಾಕಿಂಗ್ ಪ್ರತಿಕ್ರಿಯೆ

ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಮುಂದಿನ ಸುದ್ದಿ
Show comments