Select Your Language

Notifications

webdunia
webdunia
webdunia
webdunia

ಮೂವರು ಆರೋಪಿಗಳಿಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಮೂವರು ಆರೋಪಿಗಳಿಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ
nainital , ಶುಕ್ರವಾರ, 24 ನವೆಂಬರ್ 2023 (14:27 IST)
ಮೂವರು ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಅತ್ಯಾಚಾರದ ದೃಶ್ಯಗಳ ವಿಡಿಯೋ ತೆಗೆದು ನಿರಂತರವಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು. ಯಾರಿಗಾದರೂ ಮಾಹಿತಿ ನೀಡಿದಲ್ಲಿ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.    
 
ನಗರದ  ಪ್ರದೇಶದಲ್ಲಿ 26 ವರ್ಷ ವಯಸ್ಸಿನ ಮಹಿಳೆಯ ಮೇಲೆ ಮೂವರು ಆರೋಪಿಗಳು ಗ್ಯಾಂಗ್‌ರೇಪ್ ಎಸಗಿದ ಹೇಯ ಘಟನೆ ವರದಿಯಾಗಿದೆ.
 
ಗ್ಯಾಂಗ್‌ರೇಪ್‌ಗೊಳಗಾದ ಮಹಿಳೆಯ ಪತಿ ಪೊಲೀಸರಿಗೆ ನೀಡಿದ ದೂರಿನನ್ವಯ ಆರೋಪಿಗಳಾದ ಸಲೀಮ್, ಅಬಿದ್ ಮತ್ತು ಭೂರಾ ಎನ್ನುವ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ಅತ್ಯಾಚಾರಕ್ಕೊಳಗಾದ ಮಹಿಳೆ ಘಟನೆಯ ಬಗ್ಗೆ ಪೋಷಕರಿಗೆ ಮಾತ್ರ ಮಾಹಿತಿ ನೀಡಿದ್ದಳು. ಆದರೆ, ಆರೋಪಿಗಳಿಂದ ನಿರಂತರ ಕಿರುಕುಳ ಹೆಚ್ಚಾಗಿದ್ದರಿಂದ ನಂತರ ತನ್ನ ಪತಿಗೆ ಮಾಹಿತಿ ನೀಡಿದ್ದಳು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಶ್ಚಿಮ ಬಂಗಾಳದ ಕಾಂಗರೂ ಕೋರ್ಟ್ ಬಗ್ಗೆ ನಿಮಗೆ ಗೊತ್ತೇ?