Daily Horoscope

Select Your Language

Notifications

webdunia
webdunia
webdunia
webdunia

ಚಾಕುವಿನಿಂದ ಬೆದರಿಸಿ ಮಹಿಳೆಯ ಮೇಲೆ ಅತ್ಯಾಚಾರ

life threaten
ಚಾಲಕನಾಗಿರುವ ಮಹಿಳೆಯ ಪತಿ ಮನೆಯಿಂದ ಹೊರಗಡೆ ಹೋಗಿದ್ದಾಗ ಆರೋಪಿ ಹರ್‌ಪ್ರೀತ್ ಸಿಂಗ್ ಮನೆಯನ್ನು ಒತ್ತಾಯಪೂರ್ವಕವಾಗಿ ಪ್ರವೇಶಿಸಿ, ಚಾಕುವಿನಿಂದ ಮಹಿಳೆಯನ್ನು ಬೆದರಿಸಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ ಎಂದು ಫತೇಹಗರ್ ಚುರಿಯಾನ್ ಪೊಲೀಸ್ ಠಾಣೆಯ ಅಧಿಕಾರಿ  ತಿಳಿಸಿದ್ದಾರೆ. 
 
ವಿವಾಹಿತ ಮಹಿಳೆಗೆ ನೆರೆಮನೆಯ ವ್ಯಕ್ತಿಯೊಬ್ಬ ಚಾಕುವಿನಿಂದ ಬೆದರಿಸಿ ಅತ್ಯಾಚಾರವೆಸಗಿದ ಘಟನೆ ವೀಲಾ ತೇಜಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಒಂದು ವೇಳೆ ಅತ್ಯಾಚಾರವೆಸಗಿರುವ ಬಗ್ಗೆ ಬಹಿರಂಗಪಡಿಸಿದಲ್ಲಿ ಮಹಿಳೆಯ ಇಬ್ಬರು ಮಕ್ಕಳನ್ನು ಹತ್ಯೆ ಮಾಡುವುದಾಗಿ ಆರೋಪಿ ಬೆದರಿಕೆಯೊಡ್ಡಿದ್ದ 
 
ಆರೋಪಿ ಹರ್‌ಪ್ರೀತ್ ಸಿಂಗ್ ವಿರುದ್ಧ ಅತ್ಯಾಚಾರ ಮತ್ತು ಜೀವ ಬೆದರಿಕೆಯೊಡ್ಡಿದ ಪ್ರಕರಣ ದಾಖಲಿಸಲಾಗಿದ್ದು, ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಲು ಯತ್ನಿಸುತ್ತಿದ್ದ ಆರೋಪಿಗಳ ಬಂಧನ