ಪ್ರಿಯಕರನ ಜೊತೆ ಸಿಕ್ಕಿಬಿದ್ದ ಮಹಿಳೆ, ಹೆಗಲ ಮೇಲೆ ಹೊತ್ತು ನಡೆಯೋ ಶಿಕ್ಷೆ!

Webdunia
ಮಂಗಳವಾರ, 5 ಜುಲೈ 2022 (09:31 IST)
ಭೋಪಾಲ್:  ಪ್ರಿಯಕರನ ಜೊತೆ ಇದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಮಹಿಳೆಗೆ ಗ್ರಾಮಸ್ಥರು ಕಠಿಣ ಶಿಕ್ಷೆ ವಿಧಿಸಿದ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದಿದೆ.

ಸದ್ಯ ಆದಿವಾಸಿಗಳ ಪ್ರಾಬಲ್ಯವಿರುವ ಉದಯನಗರದ ಬೋರ್ಪದವ್ ಗ್ರಾಮದಲ್ಲಿ ಮಹಿಳೆಗೆ ನೀಡಿರುವ ಶಿಕ್ಷೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ. 

ಜೂನ್ 24ರಂದು ಮಹಿಳೆ ಹೊರಗಡೆ ಹೋದವಳು ವಾಪಸ್ ಬಂದಿರಲಿಲ್ಲ. ಮಹಿಳೆಯ ಪತಿ ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಹೀಗಾಗಿ ಮಹಿಳೆ ಕಾಣೆಯಾಗಿರುವ ಬಗ್ಗೆ ಪತಿ ಉದಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಹಿಳೆ ಅದೇ ಗ್ರಾಮದಲ್ಲಿರುವ ತನ್ನ ಲವ್ವರ್ ಹರಿಸಿಂಗ್ ಮನೆಯಲ್ಲಿ ವಾಸವಾಗಿದ್ದಾಳೆ ಎಂದು ತಿಳಿದುಬಂದಿದೆ.

ಮಹಿಳೆಯನ್ನು ಗ್ರಾಮದ ಜನರೇ ಹರಿಸಿಂಗ್ ಮನೆಯಲ್ಲಿರುವುದನ್ನು ಪತ್ತೆಹಚ್ಚಿದ್ದಾರೆ. ಪತಿ ಮತ್ತು ಗ್ರಾಮಸ್ಥರು ಮಹಿಳೆ ಹಾಗೂ ಪ್ರಿಯಕರನನ್ನು ಮನೆಯಿಂದ ಹೊರಗಡೆ ಕರೆತಂದು ಇಬ್ಬರನ್ನೂ ಮೊದಲು ಚೆನ್ನಾಗಿ ಥಳಿಸಿದ್ದಾರೆ. ನಂತರ ಪತಿಯನ್ನು ಮಹಿಳೆಯ ಭುಜದ ಮೇಲೆ ಕೂರಿಸಿ ಗ್ರಾಮದಾದ್ಯಂತ ಮೆರವಣಿಗೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments