Select Your Language

Notifications

webdunia
webdunia
webdunia
webdunia

ಮಸಾಜ್ ಮಾಡಿಸಿಕೊಳ್ಳಲು ಬಂದ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಯುವಕ

ಮಸಾಜ್ ಮಾಡಿಸಿಕೊಳ್ಳಲು ಬಂದ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಯುವಕ
ಚಂಡೀಘಡ , ಮಂಗಳವಾರ, 1 ಜನವರಿ 2019 (07:20 IST)
ಚಂಡೀಗಢ : 28 ವರ್ಷದ ಯುವಕನೊಬ್ಬ ಮಸಾಜ್ ಮಾಡಿಸಿಕೊಳ್ಳಲು ಬಂದ 54 ವರ್ಷದ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಹರಿಯಾಣದ ಐಟಿ ಪಾರ್ಕ್ ನಲ್ಲಿರುವ ಪಂಚತಾರಾ ಹೋಟೆಲ್ ನಲ್ಲಿ ನಡೆದಿದೆ.


ವಿದೇಶಿ ಮಹಿಳೆ ಡಿಸೆಂಬರ್ 19 ರಂದು ತನ್ನ ಪಾಟ್ನರ್ ಜೊತೆ ಪ್ರವಾಸಿ ವೀಸಾದಲ್ಲಿ ಚಂಡೀಗಢಕ್ಕೆ ಬಂದಿದ್ದರು. ಅಲ್ಲಿ ಅವರು ತಂಗಿದ್ದ ಐಟಿ-ಪಾರ್ಕ್ ನ ಸ್ಟಾರ್ ಹೋಟೆಲ್ ನ ಸ್ಪಾದಲ್ಲಿ ಮಸಾಜ್ ಗೆಂದು ಹೋಗಿದ್ದಾಗ ಆರೋಪಿ ಅಸಭ್ಯವಾಗಿ ಮುಟ್ಟಿ, ಆಕೆಯ ಜೊತೆ ಕೆಟ್ಟದ್ದಾಗಿ ವರ್ತಿಸಿ ಅತ್ಯಾಚಾರ ಎಸಗಿದ್ದಾನೆ.


ಈ ಬಗ್ಗೆ ಮಹಿಳೆ ಹೋಟೆಲ್ ಆಡಳಿತ ಮಂಡಳಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಆರೋಪಿಯನ್ನು ಕೆಲಸದಿಂದ  ವಜಾ ಮಾಡಿದ್ದಾರೆ. ಹಾಗೇ ಮಹಿಳೆ ಐಟಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಈ ಪ್ರಕರಣ ದಾಖಲಾಗಿದೆ. ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗೆಳತಿಯನ್ನು ಮದುವೆಯಾಗಲು ಲಿಂಗ ಪರಿವರ್ತನೆ ಮಾಡಿಕೊಂಡು ಬಂದ ಯುವತಿ. ಆಮೇಲೆ ಆಗಿದ್ದೇನು ಗೊತ್ತಾ?