Select Your Language

Notifications

webdunia
webdunia
webdunia
webdunia

ಮರೆಮಾಚಿದ ಆಧಾರ್ ಕಾರ್ಡ್ ಹಂಚಿಕೊಳ್ಳಿ: ಕೇಂದ್ರ ಮಹತ್ವದ ಮಾಹಿತಿ!

ಮರೆಮಾಚಿದ ಆಧಾರ್ ಕಾರ್ಡ್ ಹಂಚಿಕೊಳ್ಳಿ: ಕೇಂದ್ರ ಮಹತ್ವದ ಮಾಹಿತಿ!
bengaluru , ಭಾನುವಾರ, 29 ಮೇ 2022 (14:16 IST)
ಆಧಾರ್ ಕಾರ್ಡ್ ದುರುಪಯೋಗ ತಡೆಗಟ್ಟಲು ನಾಗರಿಕರು ಸಂಪೂರ್ಣ ಮಾಹಿತಿ ಇರುವ ಆಧಾರ್ ಕಾರ್ಡ್‌ ಕಾಪಿ ಹಂಚಿಕೊಳ್ಳುವ ಬದಲು ಮಸುಕು ಮಾಡಿದ ಆಧಾರ್ ಕಾರ್ಡ್‌ಗಳನ್ನು ಹಂಚಿಕೊಳ್ಳಿ ಎಂದು ಕೇಂದ್ರ ಸರಕಾರ ಸೂಚನೆ ನೀಡಿದೆ.
ಆಧಾರ್ ಕಾರ್ಡ್ ಗಳ ದುರ್ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್ ಪ್ರಾಧಿಕಾರ ಸೂಚನೆ ನೀಡಿದ್ದು, ಆಧಾರ್ ಕಾರ್ಡ್‌ನ ಪ್ರತಿಗಳನ್ನು ಯಾವುದೇ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಬೇಡಿ. ಏಕೆಂದರೆ ಅದು ದುರುಪಯೋಗವಾಗುವ ಸಾಧ್ಯತೆ ಇದೆ. ಅದರ ಬದಲು ಆಧಾರ್ ಕಾರ್ಡ್‌ನ ಕೊನೆಯ 4 ಅಂಕೆಗಳನ್ನು ಮಾತ್ರವೇ ಕಾಣುವಂತೆ ಪೂರ್ಣ ಮಾಹಿತಿ ಮರೆಮಾಚಿದ ಆಧಾರ್ ಅನ್ನು ಮಾತ್ರವೇ ಬಳಸಿ ಎಂದು ಕೇಂದ್ರ ಸರ್ಕಾರ ಭಾನುವಾರ ಸಲಹೆ ನೀಡಿದೆ.
ಕೇಂದ್ರ ಸರ್ಕಾರದ ಸಲಹೆಯೊಂದಿಗೆ, ಪರವಾನಗಿ ಪಡೆಯದ ಖಾಸಗಿ ಸಂಸ್ಥೆಗಳು, ಚಲನಚಿತ್ರ ಮಂದಿರಗಳು ಹಾಗೂ ಹೋಟೆಲ್‌ಗಳಲ್ಲಿ ಆಧಾರ್ ಕಾರ್ಡ್ ಪ್ರತಿಗಳನ್ನು ಸಂಗ್ರಹಿಸಲು ಹಾಗೂ ಇರಿಸಿಕೊಳ್ಳಲು ಅನುಮತಿ ಇಲ್ಲ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಐಎಐ)ದಿಂದ ಪರವಾನಗಿ ಪಡೆದ ಸಂಸ್ಥೆಗಳು ಮಾತ್ರವೇ ಜನರ ಗುರುತನ್ನು ತಿಳಿಯಲು ಆಧಾರ್ ಬಳಸಬಹುದು. ಜನರು ತಮ್ಮ ಆಧಾರ್ ಕಾರ್ಡ್ ಪ್ರತಿಯನ್ನು ಹಂಚಿಕೊಳ್ಳುವ ಮೊದಲು ಆ ಸಂಸ್ಥೆ ಯುಐಡಿಐಎಐ ನಿಂದ ಪರವಾನಗಿ ಪಡೆದಿದೆಯೇ ಎಂಬುದನ್ನು ಪರಿಶೀಲಿಸಲು ಸರ್ಕಾರ ನಾಗರಿಕರಲ್ಲಿ ಕೇಳಿಕೊಂಡಿದೆ.
 ಜನರು ತಮ್ಮ ಆಧಾರ್ ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಲು ಇಂಟರ್‌ನೆಟ್ ಕೆಫೆಗಳಲ್ಲಿ ಸಾರ್ವಜನಿಕ ಕಂಪ್ಯೂಟರ್‌ಗಳನ್ನು ಬಳಸದಂತೆ ಎಚ್ಚರಿಸಿದೆ. ಒಂದು ವೇಳೆ ಬಳಸಿದರೂ ಡೌನ್‌ಲೋಡ್ ಮಾಡಿದ ಎಲ್ಲಾ ಇ-ಆಧಾರ್ ಪ್ರತಿಗಳನ್ನು ಶಾಶ್ವತವಾಗಿ ಅಳಿಸಲು ಸೂಚನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಾನಿಪುರಿ ಪ್ರಿಯರೇ ಎಚ್ಚರ!