Select Your Language

Notifications

webdunia
webdunia
webdunia
webdunia

ಆಧಾರ್-ಪ್ಯಾನ್ ಜೋಡಣೆ ಕಡ್ಡಾಯ: ಜುಲೈ-1ರಿಂದ ಜಾರಿ

Mandatory to link Aadhaar with PAN card
ನವದೆಹಲಿ , ಬುಧವಾರ, 28 ಜೂನ್ 2017 (15:12 IST)
ನವದೆಹಲಿ:ಜುಲೈ 1ರಿಂದ ತೆರಿಗೆ ಪಾವತಿದಾರರು ಪ್ಯಾನ್ ಕಾರ್ಡ್‍ಗಳೊಂದಿಗೆ ಆಧಾರ್ ಸಂಖ್ಯೆಗಳನ್ನು ಜೋಡಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
 
ಆದಾಯ ತೆರಿಗೆ ನಿಯಮಗಳ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡುಸಿದ್ದು, ಪರ್ಮೆನೆಂಟ್ ಅಕೌಂಟ್ ನಂಬರ್ (ಪ್ಯಾನ್)ಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ 12 ಅಂಕಿಗಳ  ಬಯೋಮೆಟ್ರಿಕ್ ಆಧಾರ್ ಸಂಖ್ಯೆ ನೀಡುವುದು ಕಡ್ಡಾಯ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.
 
2017-18ರಲ್ಲಿ ತೆರಿಗೆ ಪ್ರಸ್ತಾವನೆಗಳಿಗೆ ತಿದ್ದುಪಡಿ ಮೂಲಕ ಹಣಕಾಸು ಸಚಿವ ಅರುಣ್ ಜೇಟ್ಲಿ ಆದಾಯ ತೆರಿಗೆ ಮರುಪಾವತಿ ಮಾಡುವ ವೇಳೆ ಆಧಾರ್ ಕಡ್ಡಾಯಗೊಳಿಸುವುದಾಗಿ ತಿಳಿಸಿದ್ದರು. ಇಂದು ಈ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸುವ ಮೂಲಕ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಗಳನ್ನು ಹೊಂದುವ ಮೂಲಕ ತೆರಿಗೆ ವಂಚನೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ತೆರಿಗೆ ವಂಚನೆ ತಪ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಮನೆ ಮುಂದೆ ಸತ್ತ ದನ ಪತ್ತೆ: ಮುಸ್ಲಿಂ ವ್ಯಕ್ತಿಗೆ ಥಳಿಸಿ ಮನೆಗೆ ಬೆಂಕಿ ಹಚ್ಚಿದ ಗುಂಪು