Select Your Language

Notifications

webdunia
webdunia
webdunia
webdunia

ಸೆಪ್ಟೆಂಬರ್ನಲ್ಲಿ ಸುಮಾರು 20 ಕೋಟಿ ಡೋಸ್ ಕೋವಿಶೀಲ್ಡ್ ಪೂರೈಕೆ: ಕೇಂದ್ರಕ್ಕೆ ಸೆರಮ್ ಇನ್ಸ್ಟಿಟ್ಯೂಟ್ ಮಾಹಿತಿ

ಸೆಪ್ಟೆಂಬರ್ನಲ್ಲಿ ಸುಮಾರು 20 ಕೋಟಿ ಡೋಸ್ ಕೋವಿಶೀಲ್ಡ್ ಪೂರೈಕೆ: ಕೇಂದ್ರಕ್ಕೆ ಸೆರಮ್ ಇನ್ಸ್ಟಿಟ್ಯೂಟ್ ಮಾಹಿತಿ
ನವದೆಹಲಿ , ಶುಕ್ರವಾರ, 27 ಆಗಸ್ಟ್ 2021 (14:21 IST)
ನವದೆಹಲಿ: ಸರ್ಕಾರಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸೆಪ್ಟೆಂಬರ್ನಲ್ಲಿ ಸುಮಾರು 20 ಕೋಟಿ ಡೋಸ್ ಕೋವಿಡ್ 19 ಲಸಿಕೆ ಕೊವಿಶೀಲ್ಡ್ ಅನ್ನು ಪೂರೈಸುವುದಾಗಿ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಕೇಂದ್ರ ಸರ್ಕಾರಕ್ಕೆ ತಿಳಿಸಿದೆ ಎಂದು ಗುರುವಾರ ಅಧಿಕೃತ ಮೂಲಗಳು ತಿಳಿಸಿವೆ.

ಪುಣೆ ಮೂಲದ ಎಸ್ಐಐ ಈಗಾಗಲೇ ಆಗಸ್ಟ್ನಲ್ಲಿ 12 ಕೋಟಿ ಡೋಸ್ ಕೋವಿಡ್ -19 ಲಸಿಕೆ ಪೂರೈಸಿದೆ ಎಂದು ಅವರು ಹೇಳಿದ್ದಾರೆ.
ಕೋವಿಶೀಲ್ಡ್ ಲಸಿಕೆ ಪೂರೈಕೆ ಬಗ್ಗೆ ಎಸ್ಐಐನ ಸರ್ಕಾರಿ ಮತ್ತು ನಿಯಂತ್ರಕ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮಾಹಿತಿ ನೀಡಿದ್ದು, ಸಂಸ್ಥೆಯು ತನ್ನ ಉತ್ಪಾದನಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿದೆ ಮತ್ತು ಸೆಪ್ಟೆಂಬರ್ ನಲ್ಲಿ ಸರಿಸುಮಾರು 20 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಅನ್ನು ಭಾರತ ಸರ್ಕಾರ ಮತ್ತು ಖಾಸಗಿ ಸಂಸ್ಥೆಗೆ ಪೂರೈಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.
ಎಸ್ಐಐ ನಿರ್ದೇಶಕರು ಮೇ ತಿಂಗಳಲ್ಲಿ ಕೇಂದ್ರಕ್ಕೆ ಸಲ್ಲಿಸಿದ ಉತ್ಪಾದನಾ ಯೋಜನೆಯಲ್ಲಿ, ಕೋವಿಶೀಲ್ಡ್ ಉತ್ಪಾದನೆಯನ್ನು ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ತಲಾ 10 ಕೋಟಿಯವರೆಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಆಗಸ್ಟ್ ತಿಂಗಳ ಹುಣ್ಣಿಮೆ ಚಂದ್ರನಿಗೆ ʼಸ್ಟರ್ಜಿಯಾನ್ ಮೂನ್ʼ ಎಂದು ಕರೆಯುವುದರ ಕಾರಣ