ಸಂಪುಟ ಪುನಾರಚನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರೊಂದಿಗೆ ಚರ್ಚೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಸಂಜೆ 4 ಗಂಟೆಗೆ ಸೋನಿಯಾ ಅವರನ್ನು ಭೇಟಿ ಮಾಡಲಿದ್ದು, ಸಂಪುಟ ಪುನಾರಚನೆ ಚರ್ಚೆ ಸಂದರ್ಭದಲ್ಲಿ ಕೆಪಿಸಿಸಿ ಅದ್ಯಕ್ಷರ ನೇಮಕಾತಿ ಬಗ್ಗೆಯೂ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸಚಿವ ಸಂಪುಟದಿಂದ ಯಾರನ್ನು ಕೈಬಿಡಬೇಕು ಅಥವಾ ಯಾರನ್ನು ಸೇರ್ಪಡೆಗೊಳಿಸಬೇಕು ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟಿದ್ದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭೇಟಿಯ ನಂತರ ಸಂಪುಟ ಪುನಾರಚನೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ