Select Your Language

Notifications

webdunia
webdunia
webdunia
webdunia

ರಾಷ್ಟ್ರ ರಾಜಧಾನಿಯಲ್ಲಿ ಪಾತಾಳಕ್ಕೆ ಕುಸಿದ ವಾಯು ಗುಣಮಟ್ಟ: ಮೋಡಬಿತ್ತನೆಗೆ ಸಿದ್ಧತೆ

National Capital Delhi, Anand Vihar Pradesh, Delhi Govt

Sampriya

ನವದೆಹಲಿ , ಭಾನುವಾರ, 26 ಅಕ್ಟೋಬರ್ 2025 (10:34 IST)
Photo Credit X
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣಮಟ್ಟ ಪಾತಾಳಕ್ಕೆ ಕುಸಿದಿದೆ. ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀರಾ ಕಳಪೆಯಾಗಿದೆ. ಆನಂದ್‌ ವಿಹಾರ ಪ್ರದೇಶದಲ್ಲಿ ವಾಯುಗುಣಮಟ್ಟ ಸೂಚ್ಯಂಕ  (AQI) 420 ನಷ್ಟಿದೆ. 

ಇಂದು ಬೆಳಗ್ಗೆ ಕೂಡ ವಾಯುಗುಣಮಟ್ಟ ತೀವ್ರ ಕಳಪೆ ಮಟ್ಟದಲ್ಲಿ ಕಂಡುಬಂದಿದೆ. ಪರಿಸ್ಥಿತಿ ಹದಗೆಡುತ್ತಿರುವುದರಿಂದ ದೆಹಲಿ ಸರ್ಕಾರ ಮುಂದಿನ ವಾರದಲ್ಲಿ 2 ದಿನಗಳ ಕಾಲ ಕೃತಕ ಮಳೆಗೆ ಸುರಿಸುವ ಯೋಜನೆ ಹಾಕಿಕೊಂಡಿದೆ.

ಪಶ್ಚಿಮದ ಅಡಚಣೆಯಿಂದಾಗಿ ಸೋಮವಾರದಿಂದ ಕನಿಷ್ಠ ತಾಪಮಾನ 18-20 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುವ ಸಾಧ್ಯತೆಯಿದೆ. ಈ ಪಶ್ಚಿಮದ ಅಡಚಣೆಯಿಂದಾಗಿ ಸೋಮವಾರ ಮತ್ತು ಮಂಗಳವಾರ ದೆಹಲಿಯಲ್ಲಿ ಹಗುರ ಮಳೆ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. 

ಇದರ ಬೆನ್ನಲ್ಲೇ, ದೆಹಲಿ ಸರ್ಕಾರ ಅ.29 ರಿಂದ 2 ದಿನಗಳ ಕಾಲ ಕೃತಕ ಮಳೆ ಸುರಿಸುವ ಯೋಜನೆ ಪ್ರಕಟಿಸಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಅಕ್ಟೋಬರ್ 28 ಎಂದು ಮೋಡಬಿತ್ತನೆ ನಡೆಯಲಿದೆ. ಪರಿಸ್ಥಿತಿ ಅನುಕೂಲಕರವಾಗಿದ್ದರೆ, ಅ.29 ಮತ್ತು 30 ರಂದು ದೆಹಲಿಯಲ್ಲಿ ಮೊದಲ ಕೃತಕ ಮಳೆ ಸುರಿಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ವೈದ್ಯೆ ಆತ್ಮಹತ್ಯೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ: ರೇಪ್‌ ಮಾಡಿದ್ದ ಎಸ್‌ಐ ಜೈಲುಪಾಲು