Select Your Language

Notifications

webdunia
webdunia
webdunia
webdunia

ಮತದಾರರ ತೀರ್ಪನ್ನು ಗೌರವಿಸಿ ಸ್ವೀಕರಿಸುತ್ತೇವೆ: ರಾಹುಲ್ ಗಾಂಧಿ

ಮತದಾರರ ತೀರ್ಪನ್ನು ಗೌರವಿಸಿ ಸ್ವೀಕರಿಸುತ್ತೇವೆ: ರಾಹುಲ್ ಗಾಂಧಿ
ನವದೆಹಲಿ , ಗುರುವಾರ, 19 ಮೇ 2016 (14:33 IST)
ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಗೌರವಿಸಿ ಸ್ವೀಕರಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತದಾರರ ವಿಶ್ವಾಸಗಳಿಸಲು ಪ್ರಯತ್ನಿಸುವುದಾಗಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
15 ವರ್ಷಗಳಿಂದ ಅಧಿಕಾರದಲ್ಲಿದ್ದ ಆಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನಿಂದ ಪಾಠ ಕಲಿಯುತ್ತೇವೆ ಎಂದು ತಿಳಿಸಿದ್ದಾರೆ.  
 
ಜನತೆ ನೀಡಿದ ತೀರ್ಪು ಸ್ವೀಕರಿಸುವುದಲ್ಲದೇ ಚುನಾವಣೆಯಲ್ಲಿ ಜಯಗಳಿಸಿದ ರಾಜಕೀಯ ಪಕ್ಷಗಳನ್ನು ಅಭಿನಂಧಿಸುವುದಾಗಿ ರಾಹುಲ್ ಟ್ವೀಟ್ ಮಾಡಿದ್ದಾರೆ.
 
ಚುನಾವಣೆಯಲ್ಲಿ ಹಗಲಿರಳು ಶ್ರಮಿಸಿದ ಪ್ರತಿಯೊಬ್ಬ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಿಗೆ, ಮುಖಂಡರಿಗೆ ಮತ್ತು ಮೈತ್ರಿಕೂಟದ ಪಕ್ಷಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತಿರುವುದಾಗಿ ಹೇಳಿದ್ದಾರೆ. 
 
ಬಾಂಗ್ಲಾದೇಶದಿಂದ ಅಕ್ರಮ ವಲಸಿಗರ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವುದಾಗಿ ಬಿಜೆಪಿ ನೀಡಿರುವ ಭರವಸೆಯಿಂದ ಮತದಾರರು ಬಿಜೆಪಿಯತ್ತ ವಾಲಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.
 
ಸೋಲಾರ್ ಹಗರಣ, ಭ್ರಷ್ಟಾಚಾರ ಆರೋಪಗಳಿಂದಾಗಿ ನಿರ್ಗಮಿಸುತ್ತಿರುವ ಮುಖ್ಯಮಂತ್ರಿ ಓಮನ್ ಚಾಂಡಿ, ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಜಯಗಳಿಸಿಕೊಡುವಲ್ಲಿ ವಿಫಲವಾಗಿದ್ದಾರೆ.  

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಸಾಂ ಚುನಾವಣೆ ಫಲಿತಾಂಶ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ