Select Your Language

Notifications

webdunia
webdunia
webdunia
webdunia

ಪಲ್ನಾಡುವಿನಲ್ಲಿ ಪೂಜೆ ಸಲ್ಲಿಸಿ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ: ನಾಲ್ವರು ದುರ್ಮರಣ

Andhra Pradesh Road Accident, Palnadu Deadly Road Accident, Family Member Tour Trip

Sampriya

ಪಲ್ನಾಡು , ಭಾನುವಾರ, 8 ಡಿಸೆಂಬರ್ 2024 (18:19 IST)
ಪಲ್ನಾಡು (ಆಂಧ್ರಪ್ರದೇಶ): ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣದ ಕೊಂಡಗಟ್ಟು ಆಂಜನೇಯಸ್ವಾಮಿ ದೇವಸ್ಥಾನದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವು ಹಿಂತಿರುಗುತ್ತಿದ್ದಾಗ ಅಡ್ಡಂಕಿ-ನಾರ್ಕಟ್‌ಪಲ್ಲಿ ಹೆದ್ದಾರಿಯಲ್ಲಿ ಶನಿವಾರ ಅಪಘಾತ ಸಂಭವಿಸಿದೆ, ಪ್ರಯಾಣಿಕರು ತಮ್ಮ ಹೊಸ ಕಾರಿಗೆ ಪೂಜೆ ಸಲ್ಲಿಸಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಂಡಗಟ್ಟು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ಸ್ವಗ್ರಾಮವಾದ ಸಿರಿಪುರಕ್ಕೆ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪಿಡುಗುರಳ್ಳ ಗ್ರಾಮಾಂತರ ಠಾಣೆ ಸಬ್ ಇನ್ಸ್‌ಪೆಕ್ಟರ್ ಮೋಹನ್ ತಿಳಿಸಿದ್ದಾರೆ.

ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಘೋಷಿಸುವ ಮಾತೇ ಇಲ್ಲ: ಸಿಎಂ ಪರ ಶಾಸಕ ನಾರಾಯಣಸ್ವಾಮಿ ಬ್ಯಾಟಿಂಗ್‌