ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಹೊರಗಡೆ ಗುಂಡಿನ ದಾಳಿ ನಡೆಸಿದ ಆರೋಪಿ ಅನುಜ್ ಪೊಲೀಸ್ ಕಸ್ಟಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಬೆ.
ಸಲ್ಮಾನ್ ಮನೆ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಆರೋಪಿಗಳಿಗೆ ಶಸ್ತ್ರಾಸ್ತ್ರ ಪೂರೈಸಿದ ಆರೋಪ ಅನುಜ್ ಮೇಲಿದೆ.
ಸಲ್ಮಾನ್ ಖಾನ್ ಮನೆಯಲ್ಲಿ ಫೈರಿಂಗ್ ಪ್ರಕರಣ ದಿನಕ್ಕೊಂದು ಹೊಸ ರೂಪ ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳಾದ ವಿಕ್ಕಿ ಗುಪ್ತಾ (24), ಸಾಗರ್ ಪಾಲ್ (21) ಮತ್ತು ಅನುಜ್ ಥಾಪನ್ (32) ಪೊಲೀಸರ ವಶದಲ್ಲಿದ್ದರು.
ಈ ಸುದ್ದಿ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸಲ್ಮಾನ್ ಮನೆ ಹೊರಗೆ 5 ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಇದಾದ ಬಳಿಕ ಆರೋಪಿಗಳಿಬ್ಬರೂ ಗುರುತು ಸಿಗದಂತೆ ಮೂರು ಬಾರಿ ಬಟ್ಟೆ ಬದಲಾಯಿಸಿದ್ದರು. ಅವರ ಬಳಿ 40 ಗುಂಡುಗಳಿವೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಲ್ಮಾನ್ ಖಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಹೊತ್ತಿದ್ದಾರೆ.<>