Select Your Language

Notifications

webdunia
webdunia
webdunia
webdunia

ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ

ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ
ಬೆಂಗಳೂರು , ಶುಕ್ರವಾರ, 12 ನವೆಂಬರ್ 2021 (21:13 IST)
ತುಮಕೂರು : ಬಿಟ್ ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಆಗುತ್ತದೆ ಎಂದು ತುಮಕೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ನವೆಂಬರ್ 12) ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ನಾನು ಹೇಳುವುದಿಲ್ಲ. ಬಿಟ್ ಕಾಯಿನ್ ಪ್ರಕರಣ ಪ್ರಧಾನಿ ಗಮನಕ್ಕೂ ಬಂದಿದೆ. ಖಂಡಿತ ಇದು ಪ್ರಮುಖ ವಿಚಾರ. ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಸುದ್ದಿಗಳು ಇಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ. ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಿಎಂ ಆಗಿ ಬಸವರಾಜ ಬೊಮ್ಮಾಯಿ ಮುಂದುವರಿಯುತ್ತಾರೆ ಎಂದು ತುಮಕೂರಿನಲ್ಲಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸ ವಿಚಾರವಾಗಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈಗ ತಾನೇ ನಾನು ಜಗದೀಶ್ ಶೆಟ್ಟರ್ ಜೊತೆ ಮಾತನಾಡಿದ್ದೆನೆ. ಅವರು ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ. ಬೊಮ್ಮಾಯಿ ಒಳ್ಳೆ ಕೆಲಸ ಮಾಡುತಿದ್ದಾರೆ. ಆವರೇ ಮುಂದುವರಿಯುತ್ತಾರೆ. ಅವರೇ ಅವಧಿ ಪೂರ್ಣ ಮಾಡುತ್ತಾರೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ